“ಚಾಲಿಪೋಲಿಲು” ತುಳು ಚಿತ್ರದ ಧ್ವನಿಸುರುಳಿ ಬಿಡುಗಡೆ

9:23 PM, Wednesday, October 8th, 2014
Share
1 Star2 Stars3 Stars4 Stars5 Stars
(5 rating, 4 votes)
Loading...

Chali Polilu

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದ ಚೊಚ್ಚಲ ಸಿನಿಮಾ, ಚಾಲಿಪೋಲಿಲು ತುಳು ಚಿತ್ರದ ಹಾಡಿನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಬುಧವಾರ (ಅ .8) ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಧ್ವನಿಸುರುಳಿಯನ್ನು ಬಿಡುಗಡೆಗೊಳಿದಸಿರು. ರಂಗಭೂಮಿಯ ಖ್ಯಾತ ನಟ ನಿರ್ದೇಶಕ ದೇವದಾಸ್ ಕಾಪಿಕಾಡ್, ಕುಸಲ್ದರಸೆ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಉಪಸ್ಥಿತರಿದ್ದರು.

ಚಿತ್ರದ ನಿರ್ಮಾಕ ಪ್ರಕಾಶ್ ಪಾಂಡೇಶ್ವರ್ ಉಪಸ್ಥಿತರಿದ್ದರು. ಕಾರ್ಯಕಾರಿ ನಿರ್ಮಾಕಪ ಜಗನ್ನಾಥ್ ಶೆಟ್ಟಿ ಬಾಳಾ ಸ್ವಾಗತಿಸಿದರು. ನವನೀತ್ ಶೆಟ್ಟಿ ಕದ್ರಿ ನಿರೂಪಿಸಿದರು.

ದಕ್ಷಿಣ ಭಾರತದಲ್ಲೇ ಖ್ಯಾತರಾಗಿರುವ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಅವರ ಹಿನ್ನೆಲೆ ಧ್ವನಿ ಹಾಗು ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ತುಳು ರಂಗಭೂಮಿಯ ಹೆಚ್ಚಿನೆಲ್ಲ ಪ್ರಮುಖ ತಂಡಗಳ ಮುಖ್ಯ ಕಲಾವಿದರೆಲ್ಲರಿಗೂ ಇಲ್ಲಿ ಅವಕಾಶ ನೀಡಲಾಗಿರುವುದು ಮತ್ತು ಈ ರೀತಿ ಎಲ್ಲ ಪ್ರಮುಖ ಕಲಾವಿದರನ್ನು ಸೇರಿಸಿಕೊಂಡು ನಿರ್ಮಾಣವಾಗುತ್ತಿರುವ ಮೊದಲ ತುಳು ಸಿನೆಮಾ ಇದಾಗಿದೆ. ದೇವದಾಸ್‌ ಕಾಪಿಕಾಡ್‌ ಮತ್ತು ವಿಜಯ ಕುಮಾರ್‌ ಕೊಡಿಯಾಲ್‌ಬೈಲ್‌ ಅವರು ಜಂಟಿಯಾಗಿ ದುಡಿದಿರುವ ಮೊದಲ ತುಳು ಸಿನೆಮಾ ಇದಾಗಿದೆ ಎನ್ನುತ್ತಾರೆ ಚಿತ್ರದ ನಿರ್ಮಾಪಕ ಪ್ರಕಾಶ್‌ ಪಾಂಡೇಶ್ವರ.

ವೀರೇಂದ್ರ ಶೆಟ್ಟಿ ಕಾವೂರು ಅವರ ನಿರ್ದೇಶನವಿರುವ ಈ ಸಿನೆಮಾದ ಕಥೆ, ಚಿತ್ರಕಥೆ, ಸಂಭಾಷಣೆ ಎಲ್ಲವೂ ಅವರದ್ದೇ. ಜತೆಗೆ ಸಾಹಿತ್ಯವನ್ನೂ ಒದಗಿಸಿದ್ದಾರೆ. ದೇವದಾಸ್‌ ಕಾಪಿಕಾಡ್‌, ಅರವಿಂದ ಬೋಳಾರ್‌, ನವೀನ್‌ ಡಿ. ಪಡೀಲ್‌, ಭೋಜರಾಜ ವಾಮಂಜೂರು, ಸುಂದರ ರೈ ಮಂದಾರ, ಚೇತನ್‌ ರೈ ಪ್ರಮುಖ ಪಾತ್ರದಲ್ಲಿದ್ದಾರೆ.

ಸೀರಿಯಲ್‌ ನಟಿಯರಾದ ದಿವ್ಯಾ ಮತ್ತು ನವ್ಯಾ ಅವರು ನಾಯಕಿಯರಾಗಿದ್ದು, ಕಾಪಿಕಾಡ್‌ ಅವರ ಪುತ್ರ ಅರ್ಜುನ್‌ ಅವರು ಅತಿಥಿ ನಟರಾಗಿ ಕಾಣಿಸಿಕೊಂಡಿದ್ದಾರೆ. ಸುರೇಂದ್ರ ಬಂಟ್ವಾಳ, ಪದ್ಮಜಾ ರಾವ್‌, ಲಕ್ಷ್ಮಣ ಕುಮಾರ್‌ ಮಲ್ಲೂರು, ಉಮೇಶ್‌ ಮಿಜಾರ್‌, ರಾಘವೇಂದ್ರ ರೈ, ಪ್ರಸನ್ನ ಶೆಟ್ಟಿ ಬೈಲೂರು, ಶೋಭಾ ರೈ, ಸರೋಜಿನಿ ಶೆಟ್ಟಿ, ತಿಮ್ಮಪ್ಪ ಕುಲಾಲ್‌ ಉಮಾನಾಥ ಕೋಟ್ಯಾನ್‌, ಕರ್ನೂರ್‌ ಮೋಹನ್‌ ರೈ, ಗಿರೀಶ್‌ ಶೆಟ್ಟಿ ಪೆರ್ಮುದೆ, ಪ್ರದೀಪ್‌ ಆಳ್ವ ಕದ್ರಿ, ಸದಾಶಿವ ದಾಸ್‌, ಆಗ್ನೆಲ್‌, ಪಾಂಡುರಂಗ, ಮಂಗೇಶ್‌ ಭಟ್‌, ರವಿ ಸುರತ್ಕಲ್‌, ದಯಾನಂದ ಕುಲಾಲ್‌, ಸುರೇಶ್‌ ಕುಲಾಲ್‌, ಸುಮಿತ್ರಾ ರೈ, ರಶ್ಮಿಕಾ, ವಿದ್ಯಾಶ್ರೀ , ಪಾರ್ವತಿ, ಕರುಣಾಕರ ಸರಿಪಳ್ಳ, ಸೋಮು ಜೋಕಟ್ಟೆ ಮೊದಲಾದ ಕಲಾವಿದರು ಚಿತ್ರದಲ್ಲಿದ್ದಾರೆ.

ಇದರಲ್ಲಿ ಒಟ್ಟು ಆರು ಹಾಡುಗಳಿವೆ. ಚಾಲಿಪೋಲಿಲು ಹಾಡನ್ನು ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು ರಚಿಸಿದ್ದು, ಚಿಂತನ್ ವಿಕಾಸ್ ಹಾಡಿದ್ದಾರೆ. ಓ ಮೈನಾ ಎಂಬ ವಿ. ಮನೋಹರ್ ಅವರು ಬರೆದಿರುವ ಹಾಡನ್ನು ರಿತಿಶಾ ಪದ್ಮನಾಭನ್ ಹಾಡಿದ್ದಾರೆ. ದೇವದಾಸ್ ಕಾಪಿಕಾಡ್ ರಚನೆಯ ದಬಕ್ ದಬಾ ಐಸಾ ಹಾಡನ್ನು ಮೋಹನ್, ವಿ. ಮನೋಹರ್ ಬರೆದಿರುವ ಮಹಾಮಾಯೆ ಹಾಡನ್ನು ಅನುರಾಧಾ ಭಟ್, ವೀರೇಂದ್ರ ಶೆಟ್ಟಿ ಕಾವೂರ್ ಅವರ ಮಧುಶಾಲೆದೆ ಸೇಲೆ ಹಾಡನ್ನು ಇಂಚರ ರಾವ್ ಹಾಗೂ ವೀರೇಂದ್ರ ಶೆಟ್ಟಿ ಅವರು ಬರೆದಿರುವ ಮತ್ತೊಂದು ಹಾಡು ತೋಜಂದಿ ಮಾಯೆ ಪದ್ಯವನ್ನು ಖ್ಯಾತ ಗಾಯಕ ಮಣಿಕಾಂತ್ ಕದ್ರಿ ಅವರು ಹಾಡಿದ್ದಾರೆ ಎಂದರು.

ಸುಮಾರು 4೦೦ಕ್ಕೂ ಮಿಕ್ಕಿದ ತಮಿಳು, ತೆಲುಗು, ಮಲಯಾಳ, ಕನ್ನಡ ಚಿತ್ರಗಳಿಗೆ ನೃತ್ಯ ಸಂಯೋಜನೆ ಮಾಡಿರುವ ಕೂಲ್ ಜಯಂತ್ ಅವರ ನೃತ್ಯ ಸಂಯೋಜನೆಯಲ್ಲಿ ಮೂಡಿ ಬರುತ್ತಿರುವ ಮೊದಲ ತುಳು ಸಿನಿಮಾ ಚಾಲಿಪೋಲಿಲು.

ಮಲಯಾಳಿ ಸಿನಿಮಾಗಳಲ್ಲಿ ಕಂಡುಬರುವಂಥ ಉತ್ಕೃಷ್ಟ ಗುಣಮಟ್ಟದ ಹಾಸ್ಯಪ್ರಧಾನ ಚಿತ್ರವಾಗಿರುವ ಇದು ಆ ಸಾಲಿಗೆ ಸೇರುವ ಮೊದಲ ತುಳು ಚಿತ್ರ. ತುಳು ರಂಗಭೂಮಿಯ ಎರಡು ಅತಿ ಪ್ರಮುಖರಾಗಿರುವ ದೇವದಾಸ್ ಕಾಪಿಕಾಡ್ ಮತ್ತು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರು ಜಂಟಿಯಾಗಿ ದುಡಿದಿರುವ ಮೊದಲ ತುಳು ಸಿನಿಮಾ ಇದು. ಮಲಯಾಳ ಚಿತ್ರರಂಗದ ಖ್ಯಾತ ಕೆಮೆರಾಮ್ಯಾನ್ ಉತ್ಪಲ್ ನಾಯನಾರ್ ಅವರ ಕೆಮರಾದಿಂದ ಮೂಡಿ ಬಂದಿರುವ ಮೊದಲ ತುಳು ಚಿತ್ರ.

ಎರಡು ಕೆಮರಾಗಳನ್ನು ಬಳಸಿಕೊಂಡು ಸುಮಾರು 26 ದಿನಗಳ ಕಾಲ ಒಂದು ಹಂತದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾದಲ್ಲಿ ಒಂದು ಉತ್ತಮ ಸ್ಟಂಟ್ ದೃಶ್ಯವಿದೆ. ಈ ದೃಶ್ಯಕ್ಕಾಗಿ ವಿಶೇಷ ತಯಾರಿ ಮಾಡಲಾಗಿದ್ದು, ವಿನೋದ್ ಬೆಂಗಳೂರು ನೇತೃತ್ವದಲ್ಲಿ ನಡೆದಿದೆ. ಈ ಸ್ಟಂಟ್ ದೃಶ್ಯಕ್ಕಾಗಿ ಬೆಂಗಳೂರಿನ ಒಂದು ತಂಡವೇ ಬಂದಿತ್ತು. ಹೊಡೆದಾಟದ ದೃಶ್ಯವನ್ನು ಉತ್ಕೃಷ್ಟ ಮಟ್ಟದಲ್ಲಿ ಚಿತ್ರೀಕರಿಸಲಾಗಿದೆ. ವಿ.ಮನೋಹರ್ ಸಂಗೀತ ಒದಗಿಸಿದ್ದಾರೆ. ಮಣಿಕಾಂತ್ ಕದ್ರಿ ಅವರ ಹಿನ್ನಲೆ ಸಂಗೀತವಿದೆ. ಮಾಧವ ಶೆಟ್ಟಿ ಸುರತ್ಕಲ್ ಚಿತ್ರದಲ್ಲಿ ತಾಂತ್ರಿಕ ನಿರ್ದೇಶಕರಾಗಿ ದುಡಿದಿದ್ದಾರೆ.

Chali Polilu

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English