ನಿಟ್ಟೆ ವಿದ್ಯಾಸಂಸ್ಥೆಯ ಸಿಬ್ಬಂದಿ ವರ್ಗದಿಂದ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ

9:13 PM, Saturday, October 11th, 2014
Share
1 Star2 Stars3 Stars4 Stars5 Stars
(5 rating, 4 votes)
Loading...

Nitte cheque

ಮಂಗಳೂರು: ಜಮ್ಮು ಕಾಶ್ಮೀರದಲ್ಲಿ ನೆರೆಯಲ್ಲಿ ಹಾನಿಗೊಳಗಾದವರ ಪುನರ್ವಸತಿಗಾಗಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಸಂಗ್ರಹವಾದ ಒಟ್ಟು ಮೊತ್ತ ರೂಪಾಯಿ ಇಪ್ಪತೈದು ಲಕ್ಷದ ಡಿಮಾಂಡ್ ಡ್ರಾಫ್ಟ್ ಅನ್ನು ಸಂಸ್ಥೆಯ ಪರವಾಗಿ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಸ್. ರಮಾನಂದ ಶೆಟ್ಟಿಯವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀಯುತ ಎ.ಬಿ. ಇಬ್ರಾಹಿಂ ಅವರ ಮುಖಾಂತರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಎಮ್.ಎಸ್.ಮೂಡಿತ್ತಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಡೀನ್ ಡಾ.ಸತೀಶ್ ಕುಮಾರ್ ಭಂಡಾರಿ ಹಾಗೂ ನಿಟ್ಟೆ ವಿಶ್ವ ವಿದ್ಯಾನಿಲಯದ ಜಮ್ಮು ಕಾಶ್ಮೀರ ಮೂಲದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English