ಮಂಗಳೂರು : ಮೂಲ್ಕಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಯಡಿಯೂರಪ್ಪ ಕಾವೂರಿನಲ್ಲಿ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ನ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಎಸ್‌ವೈ ಹಲ್ಲೆ ನಡೆಸಿದ ಎಸ್‌ಐಯನ್ನು ಸರ್ಕಾರ ಕೂಡಲೆ ಅಮಾನತು ಮಾಡಬೇಕೆಂದು ಆಗ್ರಹಿಸಿದರು.
ಕಾವೂರು ಪೊಲೀಸ್ ಠಾಣೆಯೆದುರು ಶುಕ್ರವಾರ ದಿಂದ ಸಂಘಟನೆಯ ಕಾರ್ಯಕರ್ತನ ಮೇಲೆ ವೀನಾ ಕಾರಣ ಹಲ್ಲೆ ನಡೆಸಿದ ಠಾಣಾ ಎಸ್‌ಐ ಉಮೇಶ್ ಕುಮಾರ್ ಅವರ ಅಮಾನತಿಗೆ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಎಸ್‌ಐ ಉಮೇಶ್ ಕುಮಾರ್ ಅವರು ಪೊಲೀಸ್ ಠಾಣೆಗೆ ಹಾಜರಾಗಲು ನಿರಾಕರಿಸಿ ನ್ಯಾಯಾಲಯದಿಂದ ಜಾಮೀನು ಪಡೆಯಲು ಯತ್ನಿಸಿದ ಕಾರಣಕ್ಕಾಗಿ ಚರಣ್ ಎನ್ನುವ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚರಣ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆಯ ಬಳಿಕ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ನ ಕಾರ್ಯಕರ್ತರು ಎಸ್‌ಐ ಯನ್ನು ಅಮಾನತು ಮಾಡಲು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗೆ ದೂರು ನೀಡಿದ್ದರೂ. ಎಸ್‌ಐ ವಿರುದ್ದ ಯಾವುದೇ ಕ್ರಮ ಕೈಗೊಳ್ಳದ ಕಾರಣ ರಸ್ತೆ ತಡೆದು ಆಕ್ರೋಷ ವ್ಯಕ್ತ ಪಡಿಸಿದ್ದಾರೆ.
ಎಸ್‌ಐ ಅಮಾನತು ಆಗದಿದ್ದಲ್ಲಿ ನಾವು ಕಾವೂರು ಬಂದ್ ನಡೆಸುತ್ತೆವೆ ಎಂದು ವಿಶ್ವಹಿಂದೂ ಪರಿಷದ್ ನಾಯಕ ಜಗದೀಶ ಶೇಣವ ಹೇಳಿದ್ದಾರೆ.
Click this button or press Ctrl+G to toggle between Kannada and English