ಮಂಗಳೂರು : ಮಹಾರಾಷ್ಟ್ರ ಮತ್ತು ಹರಿಯಾಣದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನಾಯ ಸೋಲು ಅನುಭವಿಸಿದ ನ್ತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅ.28ರಂದು ಜಿಲ್ಲೆಯ 16 ಬ್ಲಾಕ್ ಗಳಲ್ಲಿ ಕಾಂಗ್ರೆಸ್ ಸದಸ್ಯರ ನೋಂದಾವಣೆ ಅಭಿಯಾನಕ್ಕೆ ಚಾಲನೆ ನೀಡಲಿದೆ. ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ .ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ , ಏಕಕಾಲದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ನಡೆಯಲಿದೆ. ಆಯಾ ಭಾಗದ ಸಚಿವರು, ಶಾಸಕರು, ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ಗ್ರಾ.ಪಂ.ಸದಸ್ಯರು ಹೊಸ ಸದಸ್ಯರ ನೋಂದಾವಣೆ ಸಂದರ್ಭ ಆಯಾ ಬ್ಲಾಕ್ ಗಳಲ್ಲಿ ಉಪಸ್ಥಿತರಿರುವರು ಎಂದು ಹೇಳಿದ್ದಾರೆ.
ಹೊಸ ಸದಸ್ಯರ ಸೇರ್ಪಡೆ ನಿಟ್ಟಿನಲ್ಲಿ ಕಾಂಗ್ರೆಸ್ನ ಪ್ರತಿಯೊಬ್ಬ ಸದಸ್ಯರು ಕಾರ್ಯ ನಿರ್ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವುದೇ ಮುಖ್ಯ ಉದ್ದೇಶ ಎಂದು ಕೋಡಿಜಾಲ್ ವಿವರಣೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸುರೇಶ್ ಬಲ್ಲಾಳ್, ಶಶಿಧರ ಹೆಗ್ಡೆ, ಸದಾಶಿವ ಉಳ್ಳಾಲ್, ಎಂ.ಎಸ್.ಮುಹಮ್ಮದ್, ಕಳ್ಳಿಗೆ ತಾರಾನಾಥ ಶೆಟ್ಟಿ, ಮಮತಾ ಗಟ್ಟಿ, ಟಿ.ಕೆ. ಸುಧೀರ್, ಪದ್ಮನಾಭ ನರಿಂಗಾನ, ವಿಶ್ವಾಸ್ದಾಸ್, ನಝೀರ್ ಬಜಾಲ್, ಅಪ್ಪಿ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English