ಮಂಗಳೂರು : ನಗರದ ಉರ್ವದ ಮಾರಿಗುಡಿಯ ಸಮೀಪ ಮಂಗಳೂರು ಮಹಾನಗರ ಪಾಲಿಕೆಯ ಬಯಲು ರಂಗ ಮಂಟಪದ ಬಳಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರ ಮೃತ ದೇಹ ಗುರುವಾರ ಪತ್ತೆಯಾಗಿದ್ದು ಇದೊಂದು ಕೊಲೆ ಎಂದು ಶಂಕಿಸಲಾಗಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ನಾರಾಯಣ ಎಂದು ಗರುತಿಸಲಾಗಿದ್ದು, ಬುಧವಾರ ಮಧ್ಯರಾತ್ರಿಯ ವೇಳೆಗೆ ಅಪರಿಚಿತ ವ್ಯಕ್ತಿಗಳು ಅವರ ತಲೆ ಬಾಗಕ್ಕೆ ದೊಡ್ಡ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ.
ಕೊಲೆಗೆ ಕಾರಣವೇನೆಂದು ಇನ್ನಷ್ಟೆ ತಿಳಿದು ಬರಬೇಕಿದೆ. ಈತ ಮನೆ ಹಾಗು ಕುಟುಂಬದಿಂದ ಬೇರೆಯಾಗಿದ್ದ ಬೀದಿ ಬದಿಯಲ್ಲಿ ಏಕಾಂಗಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಆರ್.ಹಿತೇಂದ್ರ, ಉಪವರಿಷ್ಠಾಧಿಕಾರಿ ವಿಷ್ಣು ವರ್ಧನ್ ಮತ್ತು ಉರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Click this button or press Ctrl+G to toggle between Kannada and English