ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಶುಕ್ರವಾರ ನಡೆದ ಪಟ್ಟಾಭಿಷೇಕದ 47ನೇ ವರ್ಧಂತ್ಯತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದ 161 ಕೇಂದ್ರಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರೈತರಿಗೆ ಕನಿಷ್ಟ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸಲಾಗುವುದು. ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇದಕ್ಕಾಗಿ 20ಕೋಟಿ ರೂ. ಹಾಗೂ ರಾಜ್ಯ ಸರ್ಕಾರದ ವತಿಯಿಂದ 60 ಕೋಟಿ ರೂ. ಬಳಸಲಾಗುವುದು ಎಂದು ಡಾ. ಹೆಗ್ಗಡೆಯವರು ಹೇಳಿದರು.
ಪ್ಲೋರೈಡ್ ಮುಕ್ತ ಕುಡಿಯುವ ನೀರು ಸರಬರಾಜಿಗಾಗಿ ರಾಜ್ಯದಲ್ಲಿ 365 ಘಟಕಗಳನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು. ಮದ್ಯವರ್ಜನ ಶಿಬಿರ, ಮಹಿಳಾ ಸಬಲೀಕರಣ ಮತ್ತು ಸ್ವಚ್ಛತಾ ಆಂದೋಲನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.
ಶ್ರೀಸಾಮಾನ್ಯನಿಗೆ ರಾಜೋಪಚಾರ : ಧರ್ಮಸ್ಥಳದಲ್ಲಿ ಎಲ್ಲಾ ಸೇವಾ ಕಾರ್ಯಗಳಲ್ಲಿ ಜನ ಸಾಮಾನ್ಯರ ಸೇವೆಗೆ ಆದ್ಯತೆ ನೀಡಲಾಗುತ್ತದೆ. ಶ್ರೀ ಮಂಜುನಾಥ ಸ್ವಾಮಿ ಅನುಗ್ರಹದೊಂದಿಗೆ ಕ್ಷೇತ್ರದ ವರ್ಚಸ್ಸನ್ನು ಬಳಸಿ ಶ್ರೀಸಾಮಾನ್ಯನಿಗೆ ರಾಜೋಪಚಾರದೊಂದಿಗೆ ಅನೇಕ ಲೋಕ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.
ಬದುಕಿನ ಪ್ರತಿಯೊಂದು ಕ್ಷಣವನ್ನೂ ನಾವು ಎಚ್ಚರಿಕೆಯಿಂದ ಬಳಸಬೇಕು ಎಂದು ಕಿವಿ ಮಾತು ಹೇಳಿದ ಹೆಗ್ಗಡೆಯವರು ನೌಕರರು ಸತ್ಯ, ಧರ್ಮ, ನ್ಯಾಯದೊಂದಿಗೆ ನಿಷ್ಠೆಯಿಂದ ತನ್ನ ಕರ್ತವ್ಯವನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ ಕನಕಗಿರಿ ಕ್ಚೇತ್ರದ ಭುವನಕೀರ್ತಿ ಸ್ವಾಮೀಜಿ ಮಾತನಾಡಿ ಭಗವಂತನ ಭಕ್ತಿ, ಉಪಾಸನೆ ಮಾಡಿದಾಗ, ದಾನ ಮಾಡಿದಾಗ ಮಾನಸಿಕ ಸುಖ-ಶಾಂತಿ ಮತ್ತು ನೆಮ್ಮದಿ ಲಭಿಸುತ್ತದೆ. ಧರ್ಮಾತ್ಮರ ಕೆೊರತೆ ಹಾಗೂ ಸೂಕ್ತ ಮಾರ್ಗದರ್ಶನದ ಅಭಾವದಿಂದಾಗಿ ಇಂದು ತೀರ್ಥ ಕ್ಷೇತ್ರಗಳು ಸಮಸ್ಯೆಗಳ ಆಗರವಾಗುತ್ತಿವೆ. ಆದರೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆತ್ಮವಿಶ್ವಾಸದಿಂದ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಆದರ್ಶ ಹಾಗೂ ಅನುಕರಣೀಯವಾಗಿವೆ. ಧರ್ಮಸ್ಥಳದ ನೌಕರರ ಸ್ವಾಮಿ ನಿಷ್ಠೆ ಮತ್ತು ಕರ್ತವ್ಯ ನಿಷ್ಠೆಯನ್ನು ಸ್ವಾಮೀಜಿ ಶ್ಲಾಘಿಸಿದರು.
ಹಿರಿಯ ನೌಕರರಾದ 13 ಮಂದಿಯನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು ಸನ್ಮಾನಿತರ ಪರವಾಗಿ ರಮೇಶ ಹೆಬ್ಬಾರ್ ಕೃತಜ್ಞತೆ ವ್ಯಕ್ತಪಡಿಸಿದರು.
ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಪ್ರೊ.ಎಸ್. ಪ್ರಭಾಕರ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English