ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ವಿಶೇಷ ಪೊಲೀಸ್ ದಳ ಅಗತ್ಯ

11:30 PM, Thursday, November 6th, 2014
Share
1 Star2 Stars3 Stars4 Stars5 Stars
(5 rating, 4 votes)
Loading...
ACSU

ಮಂಗಳೂರು: ವಿದ್ಯಾರ್ಥಿಗಳ ಮೇಲೆ ರಾಜ್ಯದೆಲ್ಲೆಡೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ವಿಶೇಷ ಪೊಲೀಸ್ ದಳವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಸರ್ವ ಕಾಲೇಜ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ನ6. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರ್ವ ಕಾಲೇಜ್ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ವಿ ಶೆಟ್ಟಿ ಮಾತನಾಡಿ ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ನಡೆದಿರುವ ನಂದಿತಾ ಶಂಕಾಸ್ಪದ ಸಾವಿನ ಪ್ರಕರಣವನ್ನು ಬಯಲಿಗೆಳೆಯಲು ಪೊಲೀಸ್ ಇಲಾಖೆಯಿಂದ ಇನ್ನೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಅಕ್ಷತಾ, ರತ್ನಾ ಕೊಠಾರಿ ಸಾವು ಸಂಭವಿಸಿದಾಗಲೂ ಆರೋಪಿಗಳ ಬಂಧನ ನಡೆದಿಲ್ಲ. ಆದ್ದರಿಂದ ಪ್ರತೀ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ರಕ್ಷಣೆಗೆ ವಿಶೇಷ ಪೊಲೀಸ್ ದಳ ಸ್ಥಾಪನೆಯ ಅಗತ್ಯವಿದೆ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣವನ್ನು ಬೇಧಿಸಲು ಪೊಲೀಸ್ ಇಲಾಖೆ ಮತ್ತು ಸರಕಾರ ಪ್ರಯತ್ನ ಪಡಬೇಕಾಗಿದೆ ಎಂದರು. ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಕಾಲೇಜ್‍ಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ACSU

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English