ಎಲ್ಲೆಡೆ ಭಕ್ತಿ ಸಂಭ್ರಮದ ಮಹಾಶಿವರಾತ್ರಿ ಆಚರಣೆ

7:33 PM, Tuesday, February 17th, 2015
Share
1 Star2 Stars3 Stars4 Stars5 Stars
(5 rating, 4 votes)
Loading...
Shivaratri

ಮಂಗಳೂರು: ಶಿವರಾತ್ರಿ ಪ್ರಯುಕ್ತ ಶಿವ ದೇವಾಲಯದಲ್ಲಿ ಮಂಗಳವಾರ ಮುಂಜಾನೆಯಿಂದಲೇ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿಷೇಕ, ಅರ್ಚನೆಗಳನ್ನು ಮಾಡಿದರು.

ಮಹಾಶಿವರಾತ್ರಿಯು ಹಿಂದೂ ಕ್ಯಾಲೆಂಡರ್ ಪ್ರಕಾರ ಪಾಲ್ಗುಣ ಮಾಸದ ೧೪ ನೇ ದಿನ ಬರುತ್ತದೆ. ಈ ದಿನ ಭಕ್ತಾಧಿಗಳು ರಾತ್ರಿ ಹಗಲು ಭಕ್ತಿ ಶ್ರಧ್ದೆಯಿಂದ ಶಿವನ ಅರಾಧನೆಯಲ್ಲಿ ತೊಡಗುತ್ತಾರೆ. ಪುರಾಣಗಳಲ್ಲಿ ಮಹಾಶಿವರಾತ್ರಿಯನ್ನು ಶಿವನು ಪಾರ್ವತಿಯನ್ನು ವರಿಸಿದ ಮಹಾದಿನ ಎಂದು ಉಲ್ಲೇಖಿಸಲಾಗಿದೆ.

ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು ಭಕ್ತಾಧಿಗಳು ಉಪಾವಾಸ, ವೃತಗಳಲ್ಲಿ ತೊಡಗಿ ಶಿವನ ಧ್ಯಾನ ಮಾಡುತ್ತಾರೆ.

ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನ, ಉರ್ವಾ ಪಂಚಲಿಂಗೇಶ್ವರ ದೇವಸ್ಥಾನ, ಕಾವೂರು ಪಂಚಲಿಂಗೇಶ್ವರ ದೇವಸ್ಥಾನ, ಸುರತ್ಕಲ್ ಇಡ್ಯಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪಣಂಬೂರಿನ ಶ್ರೀ ನಂದನೇಶ್ವರ ದೇವಸ್ಥಾನ, ಕೆ.ಆರ್.ಇ.ಸಿ ಎದುರಿನ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ್ಹಿಸಿದ್ದರು.

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇಗುಲದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ಶಿವನಾಮ ಸ್ಮರಣೆ, ಧ್ಯಾನ, ಭಜನೆ ಮೊದಲಾದ ಕಾರ್ಯಕ್ರಮಗಳು ನಡೆದವು. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ಶಿವ ಪೂಜೆಯನ್ನು ಮಾಡುವ ಮೂಲಕ ಶಿವನಿಗೆ ಪ್ರಿಯವಾದ ಬಿಲ್ವ ಪತ್ರೆಗಳನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.

Shivaratri
Shivaratri
Shivaratri

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English