ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ

3:58 PM, Wednesday, March 4th, 2015
Share
1 Star2 Stars3 Stars4 Stars5 Stars
(5 rating, 4 votes)
Loading...

parisara mitra

ಮಂಗಳೂರು : ಜಿಲ್ಲಾಡಳಿತ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಂಗಳವಾರ ರಾಜ್ಯ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಖಾತೆ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

ಮಕ್ಕಳಲ್ಲಿ ಪರಿಸರ ಪ್ರೇಮ ಹಾಗೂ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ದಿಶೆಯಲ್ಲಿ ಅರಣ್ಯ ಇಲಾಖೆ ರೂಪಿಸಿರುವ “ಚಿಣ್ಣರ ವನ್ಯದರ್ಶನ’ ಕಾರ್ಯಕ್ರಮ ಪ್ರಾಥಮಿಕ ಹಂತದಲ್ಲಿ ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ರೈ ಹೇಳಿದರು.

“ಚಿಣ್ಣರ ವನ್ಯದರ್ಶನ’ದಲ್ಲಿ ಪ್ರೌಢಶಾಲಾ ವಿಭಾಗದ ಮಕ್ಕಳನ್ನು ಮೀಸಲು ಅರಣ್ಯದೊಳಗೆ ಪ್ರವಾಸ ಕರೆದುಕೊಂಡು ಹೋಗಿ ವಿವಿಧ ಸಸ್ಯಪ್ರಬೇಧಗಳ ಪರಿಚಯ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದೇ ರೀತಿ ಮಂಗಳೂರಿನ ಅರ್ಬನ್‌ ಇಕೋ ಪಾರ್ಕ್‌ ಕೂಡ ಸ್ಥಾಪನೆಗೊಳ್ಳಲಿದೆ. ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ| ವಾಮನ್‌ ಆಚಾರ್ಯ ಮಾತನಾಡಿ, ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಆದರೆ ಈ ಬಗ್ಗೆ ಹತಾಶೆ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿಲ್ಲ. ಅದರ ಬದಲು ಪರಿಸರ ಸಂರಕ್ಷಣೆ ಮಾಡಲು ನಾವೇನು ಮಾಡಬಹುದು ಎಂಬ ಬಗ್ಗೆ ಚಿಂತನೆ ಮಾಡಿ ಆ ದಿಶೆಯಲ್ಲಿ ಕಾರ್ಯೋನ್ಮುಖರಾಗಬೇಕು. ವೈಜ್ಞಾನಿಕ ಬೆಳವಣಿಗೆಗಳಿಂದ ಯಾವ ರೀತಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮಗಳಾಗಿದೆಯೋ ಅವುಗಳನ್ನು ವಿಜ್ಞಾನದ ಮೂಲಕವೇ ಸರಿಪಡಿಸುವ ಕಾರ್ಯ ಮಾಡಬೇಕು ಎಂದರು.

ಈ ಬಾರಿ ರಾಜ್ಯದಲ್ಲಿ 7 ಲಕ್ಷ ಮಕ್ಕಳು ಪರಿಸರ ಮಿತ್ರ ಶಾಲಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪರಿಸರದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಅವರು ಹೇಳಿದರು.

ಪ್ರಶಸ್ತಿ ಪ್ರದಾನ ಮಾಡಿದ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಪರಿಸರ ಸಂರಕ್ಷಣೆ ಶಾಲಾ ಪಠ್ಯಪುಸ್ತಕಗಳಲ್ಲಿ ಒಂದು ಪಠ್ಯವಾಗಿ ಮಕ್ಕಳಿಗೆ ಕಲಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಗಣೇಶ್‌ ಬಿ. “ಹೆಜ್ಜೆ ಗುರುತು’ ಕೈಪಿಡಿ ಬಿಡುಗಡೆ ಮಾಡಿದರು.

ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ರಾಜ್ಯ ಮಾಲಿನ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ವಿಜಯ ಕುಮಾರ್‌, ಹಿರಿಯ ಪರಿಸರ ಅಧಿಕಾರಿ ಎನ್‌. ಲಕ್ಷ್ಮಣ್‌ ಅತಿಥಿಗಳಾಗಿದ್ದರು.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಸೊಸೈಟಿ ಸದಸ್ಯ ಕಾರ್ಯದರ್ಶಿ ಎಸ್‌.ಎ. ಪ್ರಭಾಕರ ಶರ್ಮ, ಪರಿಸರ ಅಧಿಕಾರಿ ವಿಜಿ ಕಾರ್ತಿಕೇಯನ್‌ ಉಪಸ್ಥಿತರಿದ್ದರು. ಡಾ| ಕೆ.ವಿ. ರಾವ್‌ ಪ್ರಸ್ತಾವನೆಗೈದರು. ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್‌ ಸ್ವಾಗತಿಸಿದರು. ವೈಜ್ಞಾನಿಕ ಅಧಿಕಾರಿ ಜಯಪ್ರಕಾಶ್‌ ವಂದಿಸಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.

image description

1 ಪ್ರತಿಕ್ರಿಯೆ - ಶೀರ್ಷಿಕೆ - ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ

  1. ಬಸವರಾಜಪ್ಪ.ಎಂ, Hosakunduru

    ಬಸವರಾಜಪ್ಪ.ಎಂ ನಾವು ಸರ್ಕಾರಿ ಶಾಲೆಯಲ್ಲಿ ಕರ್ತವ್ಯವನ್ನು ಮಾಡುತ್ತಿದ್ದು.ನಮ್ಮ ಶಾಲೆಯ ಹೆಸರು GLPS H A K Colony.S,Neralakere_post.
    Hosadurga_tq,chitradurga_Dist.
    ಇಲ್ಲಿ ಸೇವೆ ಸಲ್ಲಿಸುತ್ತಿದ್ದು.ನಾವು ಈ 3 ವರ್ಷದಿಂದಲೂ ಪರಿಸರ ಮಿತ್ರಕ್ಕೆ ಅರ್ಜಿಯನ್ನು ಸಲ್ಲಿಸಲು ಪ್ರಯತ್ನ ಮಾಡುತ್ತಿದ್ದೇನೆ,ಆದರೆ ಅರ್ಜಿ ನಮುನೆಯು ಸಿಕ್ಕಿಲ್ಲ.ಅದು ಯಾವಾಗ? ಹೇಗೆ? ಎಲ್ಲಿಗೆ?ಸಲ್ಲಿಸ ಬೇಕು ಏನೆಂಬುದನ್ನು ತಾವುಗಳು ತಿಳಿಸುವುದರ ಮೂಲಕ ಸಹಾಯ ಮಾಡಿ ಎಂದು ತಮ್ಮಲ್ಲಿ ವಿನಂತಿಸುತ್ತೇವೆ.ಏಕೆಂದರೆ ನಮ್ಮ ಶಾಲೆಯು ತುಂಬಾ ಸುಂದರವಾಗಿದೆ.ಉತ್ತಮ ಶಾಲೆ,ಅತ್ಯುತ್ತಮ ಶಿಕ್ಷಕ,ಉತ್ತಮ ಕನ್ನಡ ಮಾಧ್ಯಮ ಶಾಲೆ.ಹೀಗೆ ಹಲವು ಪ್ರಶಸ್ತಿಗಳನ್ನು ಪಡೆದ ಶಾಲೆಯಾಗಿದೆ.ಅದಕ್ಕಾಗಿಯೇ ಮಕ್ಕಳ ಶಿಕ್ಷಣ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಶಿಕ್ಷಕರ ಹೆಸರು ಬಸವರಾಜಪ್ಪ.ಎಂ ಮೊಬೈಲ್ ನಂಬರ್,9482900052

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English