ಇತಿಹಾಸ ಪ್ರಸಿದ್ಧ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಮಾರಿಪುಜೆ

12:39 PM, Wednesday, February 23rd, 2011
Share
1 Star2 Stars3 Stars4 Stars5 Stars
(No Ratings Yet)
Loading...

ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನಮಂಗಳೂರು :  ಮಂಗಳೂರಿನ ಇತಿಹಾಸ ಪ್ರಸಿದ್ಧ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ  ವರ್ಷಾವಧಿ ಮಹಾಪೂಜೆಯು ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಅತೀ ವಿಜೃಂಭಣೆಯಿಂದ ಜರಗಿತು.
ಮೊದಲ ದಿನ ರಾತ್ರಿ  ಮಾರಿಯಮ್ಮ ಕ್ಷೇತ್ರದ ವಿಶೇಷ ಸಂಪ್ರದಾಯವಾದ ಹಾಲು ಉಕ್ಕಿಸುವ ಪೂಜೆಯೊಂದಿಗೆ ಆರಂಭವಾದ ಉತ್ಸವವು ಎರಡನೇ ದಿನದಂದು ಇಲ್ಲಿನ ಪರಂಪರೆಯಂತೆ ನೈವೇದ್ಯ ಬಲಿ, ರಾಶಿಪೂಜೆ, ಮಾರಿ ಉಚ್ಚಿಷ್ಠ, ಮೊದಲಾದ ಸಾಂಪ್ರದಾಯಿಕ ವಿಧಿ ವಿಧಾನದೊಂದಿಗೆ ನಡೆಯಿತು. ವರ್ಷಾವಧಿ ಮಹೋತ್ಸವಕ್ಕೆ ಫೆ.11ರಂದು ಪ್ರಸಾದ ಹಾರಿಸುವ ಮೂಲಕ ಈ ಬಾರಿಯ ಚಾಲನೆ ನೀಡಲಾಗಿತ್ತು.
ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನಮೊಗವೀರ ಸಮುದಾಯ ಹಾಗು ಊರ ಜನತೆ ಮಹಾಪೂಜೆಯಲ್ಲಿ ಪಾಲ್ಗೊಂಡು  ದರ್ಶನ ಬಲಿ, ದೀಪಬಲಿ, ಮಡಸ್ನಾನ, ಕಂಚಿಲ್ ಸೇವೆಳಿಂದ   ಶ್ರೀದೇವಿಯ ಕ್ರಪೆಗೆ ಪಾತ್ರರಾದರು.
ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನಮಹಾಪೂಜೆ ಸಂದರ್ಭದಲ್ಲಿ ವಿಶೇಷವಾಗಿ ತಯಾರಿಸಲಾದ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ, 4.ಕೆ.ಜಿ ತೂಕವಿರುವ “ಸ್ವರ್ಣ ಶಿಖರ”ವನ್ನು ಅದ್ದೂರಿ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ತರಲಾಗಿತ್ತು. ಬಳಿಕ ಪೂಜಾ ವಿಧಿವಿಧಾನಗಳೊಂದಿಗೆ ಮಹಾದೇವಿಯ ಗರ್ಭಗುಡಿಗೆ ಮೇಲೆ ಪ್ರತಿಷ್ಠಾಪಿಸಲಾಗಿತು.
ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ದೇವದಾಸ್ ಪುತ್ರನ್, ಮೊಕ್ತೇಸರರಾದ ಎಂ ಜನಾರ್ಧನ್,  ಸೇಸಪ್ಪ ಗುರಿಕಾರ, ಕೇಶವ.ಡಿ.ಅಮೀನ್, ಯಾದವ ಸಾಲ್ಯಾನ್ ಬೊಕ್ಕಪಟ್ಣ ಮುಂತಾದವರ  ನೇತ್ರತ್ವದಲ್ಲಿ ವರ್ಷವಧಿ ಮಹಾಪೂಜೆಯು ಸಂಭ್ರಮದಿಂದ ನೆರವೇರಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English