ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ದಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ‍್ಯಗಾರ ಬಂಟ್ವಾಳ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ. ಮಕ್ಕಳಿಗೆ ಶಿಕ್ಷಣ ಅಗತ್ಯ ಶಿಕ್ಷಣದಿಂದ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪುರಂದರ ಹೆಗ್ಡೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ರವೀಂದ್ರ ಕುಕ್ಕಾಜೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು. ಬಂಟ್ವಾಳ ಕಾರ್ಮಿಕ ನಿರೀಕ್ಷಕ ಎಂ.ಪ್ರಸನ್ನ ಕುಮಾರ್ ಪ್ರಸ್ತಾವಿಸಿದರು. ಜಿಲ್ಲಾ ಕಾರ್ಮಿಕ ನಿರೀಕ್ಷಕ ಕುಮಾರ್ ಬಿ.ಆರ್.ಸ್ವಾಗತಿಸಿ ಚಿದಾನಂದ ಕಾಮತ್ ವಂದಿಸಿದರು.
Click this button or press Ctrl+G to toggle between Kannada and English