ಮಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಶನಿವಾರ ಬೆಳಿಗ್ಗೆ ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಕಲ್ಲಡ್ಕದಲ್ಲಿ ನಾಗರೀಕರು ಚರಂಡಿ ಸ್ವಚ್ಛಗೊಳಿಸಲು ಬಂದ ಜೆಸಿಬಿಯ ಕಾರ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿ ತಡೆದ ಘಟನೆ ನಡೆದಿದೆ.
ನಾಗರೀಕರು 5 ವರ್ಷಗಳಲ್ಲಿ ಹಲವು ಬಾರಿ ಮನವಿ ಸಲ್ಲಿಸಿ ಚರಂಡಿ ಸ್ವಚ್ಛಗೊಳಿಸಲು ಆಗ್ರಹಿಸಿದ್ದರೂ ಸ್ಪಂದಿಸದೆ ಇದೀಗ ಚುನಾವಣಾ ಅಧಿಸೂಚನೆ ಪ್ರಕಟವಾದ ನಂತರ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿರುವ ಗ್ರಾಮ ಪಂಚಾಯತ್ ನಡೆಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿದೆ.
Click this button or press Ctrl+G to toggle between Kannada and English