ನಿವೃತ್ತ ಡಿವೈಎಸ್ಪಿ ಬಿ.ಜೆ. ಭಂಡಾರಿ ನಿಧನ

12:03 AM, Wednesday, June 3rd, 2015
Share
1 Star2 Stars3 Stars4 Stars5 Stars
(5 rating, 4 votes)
Loading...
BJ Bhandary

ಮಂಗಳೂರು : ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಡಿವೈಎಸ್ಪಿ ಬಿ.ಜೆ. ಭಂಡಾರಿ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ನಿವಾಸಿಯಾದ ಭಂಡಾರಿ ಉತ್ತಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟ್ರಪತಿ ಪದಕ ಹಾಗೂ 2 ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದರು.

ಸೋಮವಾರ ಮಧ್ಯಾಹ್ನ ಅವರು ಬ್ರಹ್ಮಾವರ ಎಸ್ಎಂಎಸ್ ಕಾಲೇಜಿನ ಬಳಿ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅವರು ಸಂಬಂಧಿಕರ ಮದುವೆ ಆರತಕ್ಷತೆ ಕಾರ್ಯಕ್ರಮಕ್ಕೆ ಹೋಗಿದ್ದರು. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಎಸ್ಎಂಎಸ್ ಕಾಲೇಜು ಬಳಿಯ ಹೋಟೆಲ್‌ನಲ್ಲಿ ಊಟ ಮುಗಿಸಿ ಹೆದ್ದಾರಿ ದಾಟಲು ನಿಂತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಬಿ.ಜೆ. ಭಂಡಾರಿ ಅವರು ಪ್ರಾಥಮಿಕ ಮತ್ತು ಜೂನಿಯರ್ ಕಾಲೇಜು ಶಿಕ್ಷಣವನ್ನು ಬೆಳ್ತಂಗಡಿಯಲ್ಲಿ, ಪದವಿ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಪಡೆದಿದ್ದರು. ಎಸ್ಐ ಆಗಿ ಪೊಲೀಸ್ ಇಲಾಖೆಗೆ ಸೇರಿದ ಅವರು ಪದೋನ್ನತಿಗೊಂಡು ಡಿವೆಎಸ್ಪಿಯಾಗಿ ನಿವೃತ್ತರಾಗಿದ್ದರು.

ಮಂಗಳೂರು ಭಂಡಾರಿ ಸಮಾಜ ಸಂಘದ ಮಾಜಿ ಅಧ್ಯಕ್ಷರಾದ ಇವರು, ದಕ್ಷಿಣ ಕನ್ನಡ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸ್ಥಾಪಕರಾಗಿದ್ದರು.

ನಂದಿಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಭಂಡಾರಿಯವರ ಅಂತಿಮ ಸಂಸ್ಕಾರ ಮಂಗಳವಾರ ನಡೆಯಿತು. ಬೆಳಗ್ಗೆ, ಗಣ್ಯರು ರಾಜಕೀಯ ಮುಖಂಡರು, ಮಂಗಳೂರು ಕಮಿಷನರೇಟ್ ಬಳಿ ಇರುವ ಪೊಲೀಸ್ ಹುತಾತ್ಮ ಸ್ಮಾರಕದ ಬಳಿ ಅಂತಿಮ ನಮನ ಸಲ್ಲಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English