ಬೆಂಗಳೂರು: ತೀರ್ಥಹಳ್ಳಿ ವಿದ್ಯಾರ್ಥಿನಿ ನಂದಿತಾ ಸಾವಿನ ಪ್ರಕರಣದ ಸಂಬಂಧ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
2014ರಲ್ಲಿ ನಡೆದ ಈ ಪ್ರಕರಣದಲ್ಲಿ ಕೋಮು ಬಣ್ಣ ಪಡೆದು ಗಲಭೆ ನಡೆದಿತ್ತು. ಇದು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಬಾಲಕಿ ನಂದಿತಾಳನ್ನು ಮೂವರು ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿ ವಿಷ ಕುಡಿಸಿ, ಅಸ್ವಸ್ಥಳಾದ ಬಾಲಕಿಯನ್ನು ರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿತ್ತು. ಅಕ್ಟೋಬರ್ 31ರಂದು ನಂದಿತಾ ಸಾವನ್ನಪ್ಪಿದ್ದಳು.
ಸಾರ್ವಜನಿಕರ ಪ್ರತಿಭಟನೆ, ಒತ್ತಡದ ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ವಿದ್ಯಾರ್ಥಿನಿ ನಂದಿತಾ ಮಾನಸಿಕ ಒತ್ತಡದಿಂದ ವಿಷ ಸೇವಿಸಿ ಸಾವನ್ನಪ್ಪಿರುವುದಾಗಿ ವರದಿ ನೀಡಿತ್ತು.
Click this button or press Ctrl+G to toggle between Kannada and English