ಅಧಿಕ ಬಡ್ಡಿ: ಫೈನಾನ್ಸ್‌ಗಳಿಗೆ ಎಚ್ಚರಿಕೆ

11:25 PM, Friday, July 10th, 2015
Share
1 Star2 Stars3 Stars4 Stars5 Stars
(5 rating, 6 votes)
Loading...
BK Saleem

ಮಂಗಳೂರು : ಇತ್ತೀಚಿನ ದಿನಗಳಲ್ಲಿ ರೈತರು ಸಹಕಾರ ಸಂಘಗಳಿಂದ ಮತ್ತು ಖಾಸಗಿ ಲೇವಾದೇವಿ/ ಹಣಕಾಸು ಸಂಸ್ಥೆಗಳಿಂದ ಸಾಲ ಪಡಕೊಂಡು ಸಾಲ ಮರುಪಾವತಿಸಲು ಅಶಕ್ತರಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿವೆ.

ಕರ್ನಾಟಕ ಲೇವಾದೇವಿ ಕಾಯ್ದೆ ಹಾಗೂ ಗಿರವಿ ಕಾಯ್ದೆಯಡಿ ಪರವಾನಗಿ ಪಡಕೊಂಡ ಲೇವಾದೇವಿಗಾರರು, ಹಣಕಾಸು ಸಂಸ್ಥೆಗಳು ಹಾಗೂ ಗಿರವಿದಾರರು ಕರ್ನಾಟಕ ಲೇವಾದೇವಿ ಕಾಯ್ದೆ 1961 ಕಲಂ 28ರ ಪ್ರಕಾರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 16 ರ ಬಡ್ಡಿ ದರ ಮಾತ್ರ ವಿಧಿಸಬೇಕಾಗಿದೆ. ನಿಗದಿಪಡಿಸಿದ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿಯನ್ನು ಸಾಲಗಳ ಮೇಲೆ ವಿಧಿಸಿ ವಸೂಲಿ ಮಾಡಿದ್ದಲ್ಲಿ, ಕರ್ನಾಟಕ ಲೇವಾದೇವಿ ಕಾಯ್ದೆ 1961 ಕಲಂ 39 ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅತ್ಯಧಿಕ ಬಡ್ಡಿಯೊಂದಿಗೆ ಸಾಲ ವಸೂಲಿ ಮಾಡಿ ರೈತರನ್ನು ಸಂಕಷ್ಟಕ್ಕೆ ಒಳಪಡಿಸಿ ಅಹಿತಕರ ಘಟನೆ ಸಂಭವಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆಗಳ ವಿರುದ್ದ ಕಾನೂನಿನ ರೀತ್ಯಾ ಕ್ರಮಕೈಗೊಳ್ಳಲಾಗುವುದೆಂದು ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ ಎಚ್ಚರಿಕೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English