ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ 2015-18 ನೇ ಸಾಲಿನ ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ.
ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,ಕೋಶಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ರಾವ್ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಸುರೇಶ್ ಬೆಳಗಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಮಕೃಷ್ಣ ಆರ್, ಕಿರಣ್ ಯು ಸಿರ್ಸಿಕರ್, ಮುಹಮ್ಮದ್ ಆರೀಫ್, ಇಬ್ರಾಹಿಂ ಅಡ್ಕಸ್ಥಳ, ಆತ್ಮ ಭೂಷಣ್, ರಾಜೇಶ್ ಶೆಟ್ಟಿ ಬಳ್ಳಾಲ್‌ಬಾಗ್, ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚುನಾಯಿತರಾಗಿದ್ದಾರೆ.
ರವಿಪ್ರಸಾದ್ ಕಮಿಲ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
Click this button or press Ctrl+G to toggle between Kannada and English