ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

9:59 PM, Tuesday, March 8th, 2011
Share
1 Star2 Stars3 Stars4 Stars5 Stars
(No Ratings Yet)
Loading...

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ಜಿಲ್ಲಾ ಮಹಿಳಾಮಂಡಳಗಳ ಒಕ್ಕೂಟ (ರಿ) ಮಂಗಳೂರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಬೆಳಿಗ್ಗೆಪುರಭವನದಲ್ಲಿ ಆಚರಿಸಲಾಯಿತು. ದ.ಕ. ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಟಿ.ಶೈಲಜಾ ಭಟ್ ರವರು ವಸ್ತು ಪ್ರದರ್ಶನ ಉದ್ಘಾಟಿಸಿದರು ಹಾಗೂ ಶ್ರೀಮತಿ ವಿದ್ಯಾ ನಾಯಕ್ ಅವರ ಸಂಗ್ರಹದ “ನಿಸರ್ಗದತ್ತ ಆಹಾರ” ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಉಪಾನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟ ಡಾ| ರತಿದೇವಿ, ಪ್ರೊಫೆಸರ್, ಕೆ.ಎಮ್.ಸಿ, ಮಂಗಳೂರು, ಇವರು ಮಾತನಾಡಿ, ಯಾವುದೇ ಮಹಿಳೆ ಅತ್ಯಾಚಾರಕ್ಕೊಳಗಾದಾಗ ಆತ್ಮ ಹತ್ಯೆಗೆ ಪ್ರಯತ್ನಿಸದೆ ಸೂಕ್ತ ವೈದ್ಯರನ್ನು ಬೇಟಿಮಾಡಿ, ಸಲಹೆ ಚಿಕಿತ್ಸೆಗಳನ್ನು ಪಡೆಯಬೇಕು ಎಂದು ತಿಳಿಸಿದರು.

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಮುಖ್ಯ ಅತಿಥಿಯಾಗಿ ಮಾತನಾಡಿದ ಶ್ರೀಮತಿ ಧನಲಕ್ಷ್ಮೀ ಜನಾರ್ಧನ ಡಿ. , ದಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು, ಮಹಿಳೆಯರು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆ ಹೆಚ್ಚು ಸಾಧನೆ ಮಾಡಿ ಪ್ರಶಸ್ತಿಗೆ ಪಾತ್ರರಾಗಬೇಕು. ಮಹಿಳೆ ತ್ಯಾಗಮಯಿ. ಮಹಿಳೆ ಮನೆಯನ್ನು ನಿಭಾಯಿಸುವ ಮಹಿಳೆ, ಸಮಾಜದಲ್ಲಿ ಉತ್ತಮ ಗೌರವ ಪಡೆಯಬೇಕು ಎಂದು ಹೇಳಿದರು.
ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಪ್ರೇಮಲತಾ ರಾವ್ ಅಧ್ಯಕ್ಷರು, ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ , ಶಕುಂತಳಾ ಎ. ಉಪ ನಿದರ್ೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ಶ್ರೀಮತಿ ವಿದ್ಯಾ ನಾಯಕ್, ಉಪಾಧ್ಯಕ್ಷರು ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ, ಬೆಳ್ತಂಗಡಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

image description

1 ಪ್ರತಿಕ್ರಿಯೆ - ಶೀರ್ಷಿಕೆ - ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

  1. Bhagyalakshmi, mysore

    good

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English