ಮಂಗಳೂರು: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17 ರಿಂದ 19 ರವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ ಮಹಾಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆ.26ರಂದು ಬುಧವಾರ ಎ.ಬಿ.ಶೆಟ್ಟಿ ಸಭಾಂಗಣದಲ್ಲಿ ಜರಗಿತು.
ಉದ್ಯಮಿ ಜಗನ್ನಾಥ ನಾಕ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಯುವ ಉದ್ಯಮಿ ನಿತಿನ್‌ಶೆಟ್ಟಿ ಗಣೇಶೋತ್ಸವ ಕಚೇರಿಯ ಉದ್ಘಾಟನೆ ನೆರವೇರಿಸಿದರು.
ಸೆ.12ರಿಂದ 19 ರವರೆಗೆ ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ಶ್ರೀಗಣೇಶೋತ್ಸವ ನಡೆಯಲಿದ್ದು, ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಸನ್ಮಾನಿಸಲಾಗುವುದು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಮಾಲಾಡಿ ಅಜಿತ್‌ಕುಮಾರ್ ರೈ ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಪ್ರತಿಭಾನ್ವೇಷಣೆ ಸಮಿತಿಯ ಸಂಚಾಲಕಿ ಡಾ. ಆಶಾಜ್ಯೋತಿ ರೈ ಮಾಹಿತಿ ನೀಡಿದರು. ಸಮಾರಂಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿ.ಎ.ಶಾಂತಾರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳಾರ್‌ಗುತ್ತು. ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಮೇಘನಾಥ ಶೆಟ್ಟಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಮಂಜುನಾಥ ಭಂಡಾರಿ ಶೆಡ್ಡೆ, ಸುಂದರ ಶೆಟ್ಟಿ. ಸಿ.ಎ.ಮನಮೋಹನ್ ಶೆಟ್ಟಿ, ಜಯಲಕ್ಷ್ಮೀ ಹೆಗ್ಡೆ, ಬಿ.ಶೇಖರ ಶೆಟ್ಟಿ, ಕೆ. ಉಮೇಶ್ ರೈ, ಕರುಣಾಕರ ಶೆಟ್ಟಿ ಹಾಗೂ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಜಯರಾಮ ಸಾಂತ ಸ್ವಾಗತಿಸಿದರು. ಕೃಷ್ಣರಾಜ ಸುಲಾಯ, ಅಶ್ವತ್ತಾಮ ಹೆಗ್ಡೆ ವರದಿವಾಚಿಸಿದರು. ಜತೆಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಕೊಳಂಬೆ ವಂದಿಸಿದರು. ಸುಖೇಶ್ ಚೌಟ ಕಾರ್ಯಕ್ರಮ ನಿರ್ವಹಿಸಿದರು.
Click this button or press Ctrl+G to toggle between Kannada and English