ಧಾಮಿ೯ಕ ಆಚರಣೆಯಿಂದ ಸಾಮಾಜಿಕ ನೆಮ್ಮದಿ: ಶ್ರೀನಿವಾಸ ಪೂಜಾರಿ

4:55 PM, Friday, September 18th, 2015
Share
1 Star2 Stars3 Stars4 Stars5 Stars
(5 rating, 5 votes)
Loading...
Bunts Ganeshotsava

ಮಂಗಳೂರು : ಗಣೇಶೋತ್ಸವದಂತಹ ಸಾಮೂಹಿಕ ಆಚರಣೆಗಳಿಂದ ಸಾಮಾಜಿಕ ನೆಮ್ಮದಿ ಲಭಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರದಲ್ಲಿ ನಡೆಯುತ್ತಿರುವ ಸಾವ೯ಜನಿಕ ಶ್ರೀ ಗಣೇಶೋತ್ಸವದ ಮೊದಲ ದಿನದ ಧಾಮಿ೯ಕ ಸಭೆಯಲ್ಲಿ ಅವರು ಮಾತನಾಡಿದರು.

1970 ರ ದಶಕದಲ್ಲಿ ಭೂ ಮಸೂದೆ ಕಾನೂನು ಜಾರಿಯಾದಾಗ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಭೂಮಿಯನ್ನು ಕಳೆದುಕೊಂಡ ಬಂಟ ಸಮುದಾಯದವರು ಇದನ್ನು ಸವಾಲಾಗಿ ಸ್ವೀಕರಿಸಿ ಹೊಸ ಬದುಕನ್ನು ರೂಪಿಸಿಕೊಂಡದ್ದು ನಿಜಕ್ಕೂ ಅಭಿನಂದನಾಹ೯ವಾದುದು ಎಂದರು.

Bunts Ganeshotsava

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಕೃಪಾ ಅಮರ ಆಳ್ವ ಅವರು ಮಾತನಾಡಿ, ಮಾನವೀಯ ಗುಣಗಳು ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಈಗಿನ ಮಕ್ಕಳಿಗೆ ಮಾನವೀಯತೆಯನ್ನು ಬೆಳೆಸುವುದನ್ನು ಕಲಿಸೋಣ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಶಾಸಕ ರುಕ್ಮಯ ಪೂಜಾರಿ ಅವರು ಅಪಾರ ನಾಯಕತ್ವ ಗುಣ ಹೊಂದಿರುವ ಬಂಟರು ಜಿಲ್ಲೆಯಲ್ಲಿ ಪ್ರಸಕ್ತ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಡಲು ನಾಯಕತ್ವ ವಹಿಸಬೇಕೆಂದು ಕರೆ ನೀಡಿದರು. ಸನ್ಮಾನ ಸ್ವೀಕರಿಸಿದ ಮಂಗಳೂರಿನ ಶಾಸಕ ಜೆ.ಆರ್.ಲೋಬೋ ಅವರು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಶೃದ್ಧಾ-ಭಕ್ತಿಯಿಂದ ಆಚರಿಸುತ್ತಿರುವ ಗಣೇಶೋತ್ಸವದ ಸಂಘಟಕರನ್ನು ಅಭಿನಂದಿಸಿದರು.

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ಕಾಯ೯ನಿವಾ೯ಹಕ ನಿದೇ೯ಶಕ ಹದೀ೯ಶ್ ಕುಮಾರ್ ಶೆಟ್ಟಿ, ಲಯನ್ಸ್ ಜಿಲ್ಲಾ ಗವನ೯ರ್ ಲ| ಕವಿತಾ ಶಾಸ್ತ್ರಿ, ಜಿಲ್ಲಾ ರೋಟರಿ ಗವನ೯ರ್ ರೊ|ಡಾ|ಭರತೇಶ್ ಎ., ಶ್ರೀ ರಾಜಲಕ್ಷ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜೇಶ್ ಚೌಟ, ಉದ್ಯಮಿ ಸಿರಾಜ್ ಅಹ್ಮದ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು.

ವಿವಿಧ ಕ್ಷೇತ್ರಗಳ ಸಾಧಕರಾದ ರುಕ್ಮಯ ಪೂಜಾರಿ, ಜೆ.ಆರ್.ಲೋಬೋ, ಇಬ್ರಾಹಿಂ ಕೋಡಿಜಾಲ್ ಹಾಗೂ ಓಂಕಾರ್ ಯೋಗರಾಜ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಎನ್.ರವಿರಾಜ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರು. ಜೊತೆ ಕೋಶಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ಕಾಯ೯ಕ್ರಮ ನಿವ೯ಹಿಸಿದರು. ಚಂದ್ರಹಾಸ ಶೆಟ್ಟಿ ರಂಗೋಲಿ ವಂದಿಸಿದರು.

Bunts Ganesha

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English