ಬೆಂಗಳೂರು : ಲೋಕಾಯುಕ್ತ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೂಹಗರಣಗಳ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಪೊಲೀಸರಿಗೆ ಗುರುವಾರ ಮಹತ್ವದ ಆದೇಶ ನೀಡಿದೆ.
ವಕೀಲ ಸಿರಾಜುದ್ದೀನ್ ಬಾಷಾ ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ಸದಸ್ಯರ ಭೂ ಹಗರಣಗಳ ವಿರುದ್ಧ ಸಲ್ಲಿಸಿರುವ ಮೊದಲ ದೂರಿನ ಆಧಾರದ ಮೇಲೆ 23ನೇ ಅಧೀನ ಕೋರ್ಟ್‌ನ ನ್ಯಾಯಾಧೀಶ ಸಿ.ಬಿ.ಹಿಪ್ಪರಗಿ ಮಾ.24ಕ್ಕೆ ಆದೇಶ ನೀಡುವುದಾಗಿ ತಿಳಿಸಿದ್ದರು.
ಸಿಎಂ ಕುಟುಂಬದ ಭೂ ಹಗರಣಗಳ ಮೊದಲ ದೂರಿನ ವಿಚಾರಣೆ ಪೂರ್ಣಗೊಳಿಸಿದ ನಂತರ ಈ ತೀರ್ಪು ನೀಡಿದ ನ್ಯಾಯಾಧೀಶರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಾರಗಳೊಳಗೆ ತನಿಖಾ ವರದಿಯನ್ನು ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಮೇ 4ಕ್ಕೆ ಮುಂದೂಡಿದರು.
ಸಿಎಂ ವಿರುದ್ಧದ ಭೂ ಹಗರಣಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕೋರ್ಟ್, ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸಬೇಕೆಂದು ಆದೇಶಿಸಿ ತೀರ್ಪು ನೀಡಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದೊಡ್ಡ ಹಿನ್ನಡೆಯಾದಂತಾಗಿದೆ.
Click this button or press Ctrl+G to toggle between Kannada and English