ಮಂಗಳೂರು : ಹಜ್ ನಿರ್ವಹಣಾ ಸಮಿತಿ ಮಂಗಳೂರು ಇದರ ವತಿಯಿಂದ ಪವಿತ್ರ ಹಜ್‌ಯಾತ್ರೆ ಕೈಗೊಂಡಿದ್ದ ಕರ್ನಾಟಕದ ಹಜ್ ಯಾತ್ರಾರ್ಥಿಗಳ ಮೊದಲ ತಂಡ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಸೋಮವಾರ ಆಗಮಿಸಿತು.
ದ.ಕನ್ನಡ, ಉಡುಪಿ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 666 ಮಂದಿ ಹಜ್‌ಯಾತ್ರೆ ಕೈಗೊಂಡಿದ್ದರು. ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕುಟುಂಬದ ಸದಸ್ಯರು ಯಾತ್ರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ವಸತಿ, ಊಟ, ಪ್ರಯಾಣದ ವ್ಯವಸ್ಥೆ ಉತ್ತಮವಾಗಿತ್ತು. ಮಂಗಳೂರು ಹಜ್ ನಿರ್ವಹಣಾ ಸಮಿತಿ ನಮ್ಮ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿತ್ತು. ಸೌದಿಯಲ್ಲೂ ಅಲ್ಲಿನ ಸರಕಾರ ಉತ್ತಮ ವ್ಯವಸ್ಥೆ ಮಾಡಿತ್ತು ಎಂದು ಯಾತ್ರಾರ್ಥಿಗಳು ಪ್ರತಿಕ್ರಿಯೆಸಿದರು.
ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಯೇನಪೊಯ ಮೊಹಮ್ಮದ್ ಕುಂಞಿ, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯಹ್ಯಾ ನಕ್ವಾ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English