ಮಂಗಳೂರು : ರಾಜಸ್ಥಾನ ಮೂಲದ ಲಾಬೂರಾಂ ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿದ್ದಾರೆ, ಅವರು ನಿರ್ಗಮನ ಎಸ್ಪಿ ಡಾ.ಎ.ಎಸ್.ರಾವ್ರಿಂದ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಲಾಬೂರಾಂ ಬಿಎಸ್ಸಿ ಪದವೀಧರಾಗಿದ್ದು. 2003ರಲ್ಲಿ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, 2004ನೆ ಸಾಲಿನಲ್ಲಿ ಐಪಿಎಸ್ ಅಧಿಕಾರಿಯಾಗಿ ಕೆಲಸ ಆರಂಭಿಸಿದರು.
2006ರಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರೈಸಿ, ಉಡುಪಿ ಜಿಲ್ಲೆಯ ಪ್ರಭಾರ ಎಸ್ಪಿಯಾಗಿ, ಹಾಸನ ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಚಿತ್ರದುರ್ಗ ಜಿಲ್ಲೆಯಲ್ಲೂ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಲಾಬೂರಾಂ ಇದೀಗ ದ.ಕ. ಜಿಲ್ಲಾ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ.
ಡಾ.ಎ.ಎಸ್.ರಾವ್, ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.
Click this button or press Ctrl+G to toggle between Kannada and English