ಮಂಗಳೂರು : ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ತಮ್ಮ ಮನೆಗೆ ಸೌರಶಕ್ತಿ ಮೇಲ್ಛಾವಣಿಯನ್ನು ಅಳವಡಿಸಿದ್ದಾರೆ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಶಾಸಕ ಮೊಯಿದೀನ್ ಬಾವಾ ಬುಧವಾರ ಸೌರಶಕ್ತಿ ಮೇಲ್ಛಾವಣಿ ಘಟಕ ಅಳವಡಿಕೆಗೆ ಚಾಲನೆ ನೀಡಿದರು.
ಪ್ರತಿದಿನ 47 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿಯನ್ನು ಹೊಂದಿದೆ. ಸುಮಾರು 7.50 ಲಕ್ಷದಿಂದ 8 ಲಕ್ಷ ರೂಪಾಯಿ ತನಕ ವೆಚ್ಚ ಮಾಡಿ, ದಿನವೊಂದಕ್ಕೆ 47 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಘಟಕ ನಿರ್ಮಾಣ ಮಾಡಲಾಗಿದೆ.
ಈ ಸೌರಶಕ್ತಿ ಘಟಕದಿಂದ ತಿಂಗಳಿಗೆ ತನ್ನ ಮನೆಯ ವಿದ್ಯುತ್ ಬಿಲ್ ಪಾವತಿ ಮಾಡಿ ಸುಮಾರು 7 ಸಾವಿರ ರೂ ಲಾಭ ಗಳಿಸಬಹುದು ಎನ್ನುತ್ತಾರೆ ಐವನ್ ಡಿಸೋಜಾ ಅವರು. ಸರ್ಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆ ಜನರಿಗೆ ಸಹಾಯಧನ ನೀಡಿದರೆ ಜನರು ಮನೆಗಳಲ್ಲಿ ಸೌರಶಕ್ತಿ ಘಟಕಗಳನ್ನು ಅಳವಡಿಸಿಕೊಳ್ಳಬಹುದು’ ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಮಾತನಾಡಿ ‘ಇತ್ತೀಚಿಗೆ ರಾಜ್ಯ ವಿದ್ಯುತ್ ಕೊರತೆಯನ್ನು ಎದುರಿಸುತ್ತಿದೆ. ಬೇಡಿಕೆಯಷ್ಟು ವಿದ್ಯುತ್ ಅನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆಯ ಪ್ರಮಾಣ ಕಡಿಮೆಯಾಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ. ಜನರು ಮನೆಗಳಲ್ಲಿ ಸೋಲಾರ್ ಫಲಕ ಆಳವಡಿಸಿಕೊಳ್ಳುವುದರಿಂದ. ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಬಹುದು’ ಎಂದರು.
Click this button or press Ctrl+G to toggle between Kannada and English