ಮಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಚಿವ ರಮಾನಾಥ ರೈ ಅವರು ಬೆಂಗಳೂರಿನ ತನ್ನ ಕಚೇರಿಯಲ್ಲಿ ಸಭೆ ನಡೆಸಿ ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ಬಗ್ಗೆ ಚರ್ಚೆ ನಡೆಸಿದರು.
ಜಿಲ್ಲೆಯ ಪೊಲೀಸ್ ಇಲಾಖೆಯ ಸಮಗ್ರ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಬಲಪಡಿಸುವುದು, ಭೂಗತ ಚಟುವಟಿಕೆಗಳನ್ನು ಮಟ್ಟಹಾಕುವುದು, ಜಿಲ್ಲೆಯಾದ್ಯಂತ ವಿವಿಧ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಕೆ, ಸೈಬರ್ ಪೊಲೀಸ್ ಠಾಣೆ ಪ್ರಾರಂಭ, ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ಸಿಬಂದಿ ನೇಮಕ, ಕೋಮುಸೌಹಾರ್ದ ಸಭೆಗಳನ್ನು ಏರ್ಪಡಿಸುವುದು ಹಾಗೂ ಜಿಲ್ಲಾ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.
ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ಎಡಿಜಿಪಿ ಆಲೋಕ್ ಮೋಹನ್, ಗುಪ್ತಚರ ಡಿಐಜಿ ಕೃಷ್ಣ ಭಟ್, ಎಸ್‌ಪಿ (ಸೆಕ್ಯೂರಿಟಿ) ರಾಘವೇಂದ್ರ ಪ್ರಸಾದ್ ಭಾಗವಹಿಸಿದ್ದರು.
Click this button or press Ctrl+G to toggle between Kannada and English