ಪಟಾಕಿ/ ಸಿಡಿಮದ್ದುಗಳಿಂದ ಆಗುವ ಶಬ್ಬ ಮಾಲಿನ್ಯ ತಡೆಗಟ್ಟಿ

12:38 AM, Tuesday, November 3rd, 2015
Share
1 Star2 Stars3 Stars4 Stars5 Stars
(5 rating, 6 votes)
Loading...

Diwali light

ಮಂಗಳೂರು : ಈ ವರ್ಷದ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ಬ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999ರ ಅನ್ವಯ ಹಾಗೂ ಮಾನ್ಯ ಸರ್ವೊಚ್ಚ ನ್ಯಾಯಾಲಯದ ಆದೇಶ WP(C)72/98. 21.7.2005 ರಪ್ರಕಾರ 125DB (AL) ಅಥವಾ 145Db (C) pk ಕ್ಕಿಂತ (ಪಟಾಕಿ ಸಿದ್ಧಪಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ) ಹೆಚ್ಚು ಶಬ್ಧ ಮಡುವ ಪಟಾಕಿ ಹಾಗೂ ಸಿಡಿಮದ್ದುಗಳ ಮಾರಾಟ ಮಾಡುವುದಾಗಲಿ ಅಥವಾ ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದ್ದರಿಂದ ಸಾರ್ವಜನಿಕರು 125 DB (AL) ಅಥವಾ 145 DB(c) pk ಕ್ಕಿಂತ ಹೆಚ್ಚು ಶಬ್ದ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ, ರಾ.10 ಗಂಟೆಯಿಂದ ಬೆ. 6 ರವರೆಗೆ ಶಬ್ದ ಉಂಟುಮಾಡುವ ಪಟಾಕಿ/ ಸಿಡಿಮದ್ದು ಸಿಡಿಸುವುದನ್ನು ಮಾಡಬಾರದು ಎಂದು ತಿಳಿಸಲಾಗಿದೆ.

ನಗರದ ಮತ್ತು ಪಟ್ಟಣದ ಚಿಕ್ಕಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪ ಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಸಿಡಿಸಲು ಪರಿಸರ ಅಧಿಕಾರಿಗಳು, ಮಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English