ಪ್ರಗತಿಪರಿಶೀಲನೆ: ಪೂರ್ವಭಾವಿ ಸಭೆ

7:18 PM, Wednesday, April 6th, 2011
Share
1 Star2 Stars3 Stars4 Stars5 Stars
(No Ratings Yet)
Loading...

ಇಲಾಖೆಗಳ ಪ್ರಗತಿ ಪರಿಶೀಲನೆ ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು ಏಪ್ರಿಲ್ 8ರಂದು ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದ್ದು, ಈ ಸಂಬಂಧ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಯಿತು.
ಪ್ರಗತಿಪರಿಶೀಲನೆ ಪೂರ್ವಭಾವಿ ಸಭೆಮಹಾನಗರಪಾಲಿಕೆ, ಜಿಲ್ಲಾ ಪಂಚಾಯತ್ ಒಳಗೊಂಡಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ವಿಶೇಷ ಸಾಧನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರು. ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತರಾದ ಡಾ ಕೆ ಎನ್ ವಿಜಯಪ್ರಕಾಶ್, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ಶಿವಶಂಕರ್, ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರಾದ ಎಂ ಆರ್ ವಾಸುದೇವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀ ಪ್ರಭಾಕರ್, ಡಿಸಿಪಿ ಮುತ್ತುರಾಯ್ ಅವರನ್ನೊಳಗೊಂಡಂತೆ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿಪರಿಶೀಲನೆ ಪೂರ್ವಭಾವಿ ಸಭೆ

Comments are closed.