ಪೆರುವಾಡು-ಪೆಟ್ರೋಲ್ ಬಂಕ್ ಬಳಿ ಬೆಂಕಿ

7:53 AM, Saturday, January 9th, 2016
Share
1 Star2 Stars3 Stars4 Stars5 Stars
(5 rating, 6 votes)
Loading...
fire

ಕುಂಬಳೆ: ರಾಷ್ಟ್ರೀಯ ಹೆದ್ದಾರಿ ಪೆರುವಾಡು ಪೆಟ್ರೋಲ್ ಬಂಕ್ ಸಮೀಪದ ಹಿತ್ತಿಲಿಗೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಭೀತಿ ಸೃಷ್ಟಿಸಿದ ವಾತಾವರಣ ಉಂಟಾಗಿದೆ.

ಪೆಟ್ರೋಲ್ ಬಂಕ್ ಹತ್ತಿರದ ಖಾಸಗೀ ವ್ಯಕ್ತಿಯೊಬ್ಬರ ಹಿತ್ತಿಲಿನಲ್ಲಿ ಕಾಣಿಸಿಕೊಂಡ ಬೆಂಕಿ. ಹಿತ್ತಿಲಿನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ತೆಂಗಿನ ಮರಗಳು ಸೇರಿದಂತೆ ಅನೇಕ ಮರಗಳು ಹೊತ್ತಿ ಉರಿದು ನಾಶಗೊಂಡಿವೆ. ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು, ಭಾರೀ ಅನಾಹುತ ಸಂಭವಿಸುವ ಅಪಾಯ ಎದುರಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡು ಮಾಡಿತ್ತು. ಆದರೆ ಹಿತ್ತಿಲಿಗೆ ಬೆಂಕಿ ತಗುಲಿದ ಕೆಲವೇ ಗಂಟೆಗಳಲ್ಲಿ ಕಾಸರಗೋಡು ಮತ್ತು ಉಪ್ಪಳ ಅಗ್ನಿಶಾಮಕದಳದವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತವಾಗಿ ಗಂಟೆಗಳಷ್ಟು ಹೊತ್ತು ನಡೆಸಿದ ಕಾರ್ಯಾಚರಣೆಯ ಮೂಲಕ ಸಂಭಾವ್ಯ ಭಾರೀ ದೊಡ್ಡ ಅಪಾಯವನ್ನು ತಪ್ಪಿಸಲಾಯಿತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English