ಮಂಜೇಶ್ವರ : ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭೇಟಿ ನೀಡಿದರು.
ಈ ಪ್ರಯುಕ್ತ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ಯುವ ಜನಾಂಗ ಕಠಿಣ ಪರಿಶ್ರಮಿಗಳಾಗಿ ಸುದೃಢ ದೇಶವನ್ನು ಕಟ್ಟುವ ಕಾರ್ಯವನ್ನು ನಿರಂತರ ಮಾಡಿಕೊಂಡು ಬರಬೇಕು ಎಂದು ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಅಭೀವೃದ್ಧಿ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ,ದಾಖಲೆಯ ಅವಧಿಯಲ್ಲಿ ಶ್ರೀ ಕ್ಷೇತ್ರದ ಪುನರ್‌ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದುದರ ಬಗ್ಗೆ ಸಂತಸ ಸೂಚಿಸಿದರು.
ಉಡುಪಿ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೇ ವಿಕ್ರಮಾರ್ಜುನ ಹೆಗ್ಢೆ, ರಾಜ್ಯ ಮಹಿಳಾ ಮೋರ್ಛಾದ ಉಪಾಧ್ಯಕ್ಷೆ ಸುಲೋಚನಾ ಜಿ.ಭಟ್ ಉಪಸ್ಥಿತರಿದ್ದರು. ಕ್ಷೇತ್ರದ ಆಡಳಿತ ಮೊಕ್ತೇಸರ ರವೀಂದ್ರ ರಾವ್, ಪವಿತ್ರಪಾಣಿ ಕೃಷ್ಣ ಭಟ್, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಮಹಾಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸುರೇಶ ಶೆಟ್ಟಿ ಕುಂಜತ್ತೂರು, ಪತ್ರಕರ್ತ ಪ್ರಕಾಶ್ ಇಳಂತಿಲ, ದೇವದಾಸ್ ರಾಯ್, ಪಂಚಾಯತು ಪ್ರತಿನಿಧಿ ಶೋಭಾ ಶೆಟ್ಟಿ, ಕ್ಷೇತ್ರ ಅರ್ಚಖ ಪ್ರಸನ್ನ ಭಟ್ ಮೊದಲಾದವರು ಭಾಗವಹಿಸಿದರು. ದಾಮೋದರ ಶೆಟ್ಟಿ ಕುಂಜತ್ತೂಋಉ ಕಾರ್ಯಕ್ರಮ ನಿರ್ವಹಿಸಿದರು.
ಕುಂಜತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ ಮಂಜೇಶ್ವರ: ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭೇಟಿ ನೀಡಿದರು. ಈ ಪ್ರಯುಕ್ತ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ಯುವ ಜನಾಂಗ ಕಠಿಣ ಪರಿಶ್ರಮಿಗಳಾಗಿ ಸುದೃಢ ದೇಶವನ್ನು ಕಟ್ಟುವ ಕಾರ್ಯವನ್ನು ನಿರಂತರ ಮಾಡಿಕೊಂಡು ಬರಬೇಕು ಎಂದು ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಅಭೀವೃದ್ಧಿ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ,ದಾಖಲೆಯ ಅವಧಿಯಲ್ಲಿ ಶ್ರೀ ಕ್ಷೇತ್ರದ ಪುನರ್‌ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದುದರ ಬಗ್ಗೆ ಸಂತಸ ಸೂಚಿಸಿದರು.
ಉಡುಪಿ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೇ ವಿಕ್ರಮಾರ್ಜುನ ಹೆಗ್ಢೆ, ರಾಜ್ಯ ಮಹಿಳಾ ಮೋರ್ಛಾದ ಉಪಾಧ್ಯಕ್ಷೆ ಸುಲೋಚನಾ ಜಿ.ಭಟ್ ಉಪಸ್ಥಿತರಿದ್ದರು. ಕ್ಷೇತ್ರದ ಆಡಳಿತ ಮೊಕ್ತೇಸರ ರವೀಂದ್ರ ರಾವ್, ಪವಿತ್ರಪಾಣಿ ಕೃಷ್ಣ ಭಟ್, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಮಹಾಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸುರೇಶ ಶೆಟ್ಟಿ ಕುಂಜತ್ತೂರು, ಪತ್ರಕರ್ತ ಪ್ರಕಾಶ್ ಇಳಂತಿಲ, ದೇವದಾಸ್ ರಾಯ್, ಪಂಚಾಯತು ಪ್ರತಿನಿಧಿ ಶೋಭಾ ಶೆಟ್ಟಿ, ಕ್ಷೇತ್ರ ಅರ್ಚಖ ಪ್ರಸನ್ನ ಭಟ್ ಮೊದಲಾದವರು ಭಾಗವಹಿಸಿದರು. ದಾಮೋದರ ಶೆಟ್ಟಿ ಕುಂಜತ್ತೂರು ಕಾರ್ಯಕ್ರಮ ನಿರ್ವಹಿಸಿದರು.
Click this button or press Ctrl+G to toggle between Kannada and English