ನಗರ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ಬೇಡ: ಜಿಲ್ಲಾಧಿಕಾರಿ

6:00 PM, Friday, April 15th, 2011
Share
1 Star2 Stars3 Stars4 Stars5 Stars
(No Ratings Yet)
Loading...

ಜಿಲ್ಲಾಧಿಕಾರಿ ಸುಬೋಧ್ ಯಾದವ್ಮಂಗಳೂರು : ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಅದರಲ್ಲೂ ಮುಖ್ಯವಾಗಿ ಯೋಜನೆ ಉಲ್ಲಂಘಿಸಿ ನಿರ್ಮಾಣವಾಗುವ ಕಟ್ಟಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸ ಬೇಕೆಂದು ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ಹೇಳಿದರು.
ಅವರಿಂದು ಕಾರ್ಪೋರೇಷನ್ ಕಚೇರಿಯಲ್ಲಿ ನಡೆದ ಪಾಲಿಕೆ ಅಭಿವೃದ್ಧಿ ಸಭೆಯಲ್ಲಿ ಪ್ರಗತಿಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿದ್ದು, ನಗರ ಯೋಜನಾಧಿಕಾರಿಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು. ಅಕ್ರಮಗಳ ದೂರು ವ್ಯಾಪಕವಾದರೆ ತನ್ನ ಮಧ್ಯಪ್ರವೇಶ ಅನಿವಾರ್ಯವಾದೀತು ಎಂಬ ಎಚ್ಚರಿಕೆಯನ್ನು ಜಿಲ್ಲಾಧಿಕಾರಿಗಳು ನೀಡಿದರು.
ಈ ಸಂಬಂಧ ಮಾಹಿತಿ ನೀಡಿದ ಪಾಲಿಕೆ ಆಯುಕ್ತರಾದ ಡಾ ಕೆ. ಎನ್. ವಿಜಯಪ್ರಕಾಶ್ ಅವರು, ಕಟ್ಟಡ ನೀತಿ ಉಲ್ಲಂಘನೆಯಾಗದಂತೆ ಕಾನೂನನ್ನು ಕಠಿಣವಾಗಿ ಅನುಷ್ಠಾನಕ್ಕೆ ತರಲಾಗಿದ್ದು, ನಗರದಲ್ಲಿ ಅಂತಹ ಎರಡು ಪ್ರಕರಣಗಳನ್ನು ಪತ್ತೆ ಹಚ್ಚಿ ಕಾಮಗಾಗಿ ಸ್ಥಗಿತಗೊಳಿಸಿದೆ ಎಂದು ತಿಳಿಸಿದರು. ನಾಲ್ಕು ಹಂತಗಳಲ್ಲಿ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಲಾಗುತ್ತಿದ್ದು ಕಾನೂನು ಮೀರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಹಾಗೂ ಯೋಜನೆಯಂತೆ ರೂಪಿಸಲು ಮಹಾನಗರ ಪಾಲಿಕೆ ಪ್ರತಿಯೊಂದು ಹಂತದಲ್ಲೂ ಪರಿಶೀಲನೆ ನಡೆಸುತ್ತಿದೆ ಎಂದರು.
ನಗರದಲ್ಲಿ ಕಟ್ಟಡ ತ್ಯಾಜ್ಯಗಳನ್ನು ಎಸೆಯುವ ಬಗ್ಗೆ ನಾಲ್ಕು ಕೇಸ್ ಗಳನ್ನು ದಾಖಲಿಸಲಾಗಿದ್ದು, ಸುಲ್ತಾನ ಬತ್ತೇರಿಯಲ್ಲಿ ಎರಡು ಮತ್ತು ಮಾರ್ಗನ್ ಗೇಟ್ ನಲ್ಲಿ ಎರಡು ಕೇಸ್ ಗಳನ್ನು ಹಾಕಲಾಗಿದೆ ಎಂದು ಆಯುಕ್ತರು ಸಭೆಗೆ ತಿಳಿಸಿದರು. ಪ್ಲಾಸ್ಟಿಕ್ ನಿಷೇಧಿಸುವಲ್ಲಿಯೂ ಕಠಿಣವಾಗಿ ಕ್ರಮಕೈಗೊಳ್ಳಲಾಗಿದ್ದು, 160 ಕೇಸ್ ಗಳನ್ನು ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ನಿರೀಕ್ಷೆ ಮೀರಿ ಜಾಗೃತಿ ವ್ಯವಹಾರಸ್ಥರಿಂದ ಮತ್ತು ಗ್ರಾಹಕರಿಂದ ವ್ಯಕ್ತವಾಗಿದೆ. ಈ ಸಂಬಂಧ ನಿರಂತರತೆ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯ ಪಟ್ಟರು. ಸಭೆಯಲ್ಲಿ ಪಾಲಿಕೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English