ಬದಿಯಡ್ಕ-ಬೊಳ್ಳೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ಅನುದಾನ

11:52 PM, Wednesday, February 3rd, 2016
Share
1 Star2 Stars3 Stars4 Stars5 Stars
(5 rating, 6 votes)
Loading...
DD

ಬದಿಯಡ್ಕ: ಕಾಸರಗೋಡು ಜಿಲ್ಲೆಯ ಅನೇಕ ಜನರು ಅನಾದಿ ಕಾಲದಿಂದಲೇ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಾಗಿದ್ದಾರೆ. ಹಾಗಾಗಿ ಕಾಸರಗೋಡು ಜಿಲ್ಲೆಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಸಂಧ್ಯಾ ವಿ.ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಸೋಮವಾರ ಬದಿಯಡ್ಕ ಸಮೀಪದ ಮುನಿಯೂರಿನ ಬೊಳ್ಳೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಲಭಿಸಿದ ಅನುದಾನ ರೂಪಾಯಿ 5 ಲಕ್ಷ ಮೌಲ್ಯದ ಡಿಡಿಯನ್ನು ಶ್ರೀ ಕ್ಷೇತ್ರದ ಮೊಕ್ತೇಸರ ಗೋಪಾಲಕೃಷ್ಣ ನಡುವಂತಿಲ್ಲಾಯ ಮುನಿಯೂರು ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ಈ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಊರವರೆಲ್ಲಾ ಒಗ್ಗಟ್ಟಿನಿಂದ ಕೈಜೋಡಿಸಿದರೆ ಅತಿ ಶೀಘ್ರದಲ್ಲಿ ಬ್ರಹ್ಮಕಲಶೋತ್ಸವವನ್ನು ನಡೆಸಬಹುದು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಇದರಲ್ಲಿ ಪಾಲ್ಗೊಂಡು ಇತರರನ್ನೂ ಯೋಜನೆಗೆ ಸೇರಿಸಿಕೊಳ್ಳುವುದರೊಂದಿಗೆ ಶ್ರಮದಾನದಲ್ಲಿ ಪಾಲ್ಗೊಳ್ಳಿ ಎಂದರು. ದೇವತಾ ಕಾರ್ಯಗಳಿಗೆ ತಮ್ಮ ಸಂಪಾದನೆಯ ಒಂದು ಮೊತ್ತವನ್ನು ತೆಗೆದಿರಿಸಿ ಸಮರ್ಪಣೆ ಮಾಡಿದರೆ ಎಲ್ಲರಿಗೂ ಒಳಿತಾಗಬಹುದು ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬದಿಯಡ್ಕ ವಲಯ ಮೇಲ್ವಿಚಾರಕ ಭರತ್ ಕುಮಾರ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಮಾಧವ ಭಟ್ ರಾಮ್ ತೋಟ, ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯೆಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಡಿ.ಕೆ.ನಾರಾಯಣ ಸ್ವಾಗತಿಸಿ, ಉಪಾಧ್ಯಕ್ಷ ಚುಳ್ಳಿಕ್ಕಾನ ಕೃಷ್ಣ ಭಟ್ ಪ್ರಸ್ತಾವನೆಗೈದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಮುನಿಯೂರು ವಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English