ಮಂಜೇಶ್ವರ : ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಫೆಬ್ರವರಿ 11ನೇ ಗುರುವಾರ ವಿವಿಧ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
ಬೆಳಿಗ್ಗೆ ಗಂಟೆ 7ರಿಂದ ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶರುದ್ರಾಭಿಷೇಕ, ಮಧ್ಯಾಹ್ನ12ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ ಗಂಟೆ ೮ಕ್ಕೆ ರಂಗಪೂಜೆ ,9ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ.
ಧಾರ್ಮಿಕ ಹಾಗೂ ಸಾಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪೂರ್ವಾಹ್ನ ಗಂಟೆ 9ಕ್ಕೆ ಭಜನೆ, 10ರಿಂದ ’ಶಬರ ಶಂಕರ ಲೀಲೆ’ ಹರಿಕತೆ ನಡೆಸಿಕೊಡುವವರು ಶ್ರೀ ಈಶ್ವರದಾಸ್ ಕೊಪ್ಪೇಸರ ಯಲ್ಲಾಪುರ, ಸಂಜೆ ಗಂಟೆ 6 ರಿಂದ ’ಮುರಾಸುರ ವಧೆ – ಶಾಂಭವಿ ವಿಜಯ’ ಮಕ್ಕಳ ಯಕ್ಷಗಾನ ಬಯಲಾಟ ಜರಗಲಿದೆ. ಶ್ರೀ ಮಹಾಗಣಪತಿ ಶಂಕರನಾರಾಯಣ ಸಾಂಸ್ಕೃತಿಕ ಕಲಾ ಪ್ರತಿಷ್ಠಾನ ಕೋಳ್ಯೂರು ತಂಡದವರು ರಮೇಶ ಶೆಟ್ಟಿ ಬಾಯಾರು ನಿರ್ದೇಶನದಲ್ಲಿ ಪ್ರಸ್ತುತಪಡಿಸುವರು .
Click this button or press Ctrl+G to toggle between Kannada and English