ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಿಂದ ಯುವಕನೊಬ್ಬನನ್ನು ಅಪಹರಿಸಿ ಆತನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿ, ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಬೋಳೂರು ಪರಪ್ಪು ನಿವಾಸಿ ಜಯಪ್ರಕಾಶ್ ಅಲಿಯಾಸ್ ಜೆ.ಪಿ (24) ಎಂದು ಗುರುತಿಸಲಾಗಿದೆ. ಫೆಬ್ರವರಿ 13ರಂದು ಬೆಳಗ್ಗೆ ಮಂಗಳೂರು ನಗರದ ನೀರುಮಾರ್ಗದ ಯುವಕನ್ನು ರಿಕ್ಷಾವೊಂದರಲ್ಲಿ ಬಲತ್ಕಾರವಾಗಿ ಅಪಹರಿಸಿಕೊಂಡು ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಕ್ರಮ ಬಂಧನದಲ್ಲಿರಿಸಿ ಆತನಿಗೆ ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸಿ ಆತನಲ್ಲಿದ್ದ ನಗದು ಹಣ ಹಾಗೂ ಮೊಬೈಲ್ ಫೋನ್ಗಳನ್ನು ಸುಲಿಗೆ ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Click this button or press Ctrl+G to toggle between Kannada and English