ಕಾಸರಗೋಡು: ಸಾರ್ವಜನಿಕರು ಹಾಗೂ ಸೆಕ್ಯೂರಿಟಿ ನೌಕರರು ಸಹಿತ ಇತರ ಯಾರೇ ಆಗಲಿ ಸೈನಿಕರ ಸಮವಸ್ತ್ರಗಳನ್ನು, ಸೈನಿಕ ಮಾದರಿಯ ಬಟ್ಟೆಬರೆಗಳನ್ನು ಧರಿಸಕೂಡದೆಂದು ಕಾಸರಗೋಡು ನೂತನ ಜಿಲ್ಲಾಧಿಕಾರಿ ಇ.ದೇವದಾಸನ್ ತಿಳಿಸಿದ್ದಾರೆ.
ಪಂಜಾಬ್‌ನ ಪಠಾಣ್ ಕೋಟ್ ವಾಯುಸೇನಾ ಕೇಂದ್ರಗಳಿಗೆ ಇತ್ತೀಚೆಗೆ ಭಯೋತ್ಪಾದಕರು ಆಕ್ರಮಣ ನಡೆಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಈ ಕ್ರಮ ಕೈಗೊಳ್ಳಲಾಗಿದೆ.
ಅದರ ಅಂಗವಾಗಿ ಕಾಸರಗೋಡು ಜಿಲ್ಲೆಯಲ್ಲೂ ಈ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಯೋಜನೆ ರೂಪಿಸಲಾಗಿದೆ. ಅನಧಿಕೃತವಾಗಿ ಸೈನಿಕರ ಸಮವಸ್ತ್ರ ಧರಿಸುವುದು, ಅಂತಹ ಸಮವಸ್ತ್ರಗಳನ್ನು ಮಾರಾಟ ಮಾಡುವುದು ಮುಂತಾದವುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಕಲೆಕ್ಟರ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
Click this button or press Ctrl+G to toggle between Kannada and English