ವಾಹನ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಮಹಿಳೆ ಮೃತ್ಯು

8:24 PM, Tuesday, March 22nd, 2016
Share
1 Star2 Stars3 Stars4 Stars5 Stars
(5 rating, 6 votes)
Loading...
Mahile

ಬಂಟ್ವಾಳ; ಪಾಣೆಮಂಗಳೂರು ಗ್ರಾಮದ ಬೋಳಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾ.14 ರಂದು ಅಪಘಾತ ನಡೆದಿದ್ದು, ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಮೃತದೇಹದ ಶವಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮಂಗಳೂರಿನ ಶವಾಗಾರದಲ್ಲಿರಿಸಲಾಗಿದೆ. ಮೃತ ಮಹಿಳೆಯ ವಾರೀಸುದಾರರಿದ್ದಲ್ಲಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ(08255-281111)ಯನ್ನು ಸಂಪರ್ಕಿಸುವಂತೆ ಸಂಚಾರಿ ಉಪನಿರೀಕ್ಷಕ ಚಂದ್ರಶೇಖರಯ್ಯ ತಿಳಿಸಿದ್ದಾರೆ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English