ಜೂನ್ 8 ರಂದು ಕಯ್ಯಾರ ಕಿಂಞಣ್ಣ ರೈಯವರ 97ನೇ ವರ್ಷದ ಜನ್ಮದಿನೋತ್ಸವ ಮತ್ತು ಸಾಹಿತ್ಯೋತ್ಸವ

7:00 PM, Saturday, May 28th, 2011
Share
1 Star2 Stars3 Stars4 Stars5 Stars
(No Ratings Yet)
Loading...

ಅಖಿಲ ಭಾರತ 66ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಹಾಗೂ ಕರ್ನಾಟಕ  ರಾಜ್ಯೋತ್ಸವ ಪ್ರಶಸ್ತಿ,ಮಂಗಳೂರು ವಿಶ್ವ ವಿದ್ಯಾನಿಲಯ ಡಾಕ್ಟರೇಟ್,ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ನಾಡೋkayyara kinyanna raiಜ ಪದವಿ ಪುರಸ್ಕೃತ ನಾಡೋಜ ಡಾ.ಕಯ್ಯಾರ ಕಿಂಞಣ್ಣ ರೈಯವರ 97ನೇ ವರ್ಷದ ಜನ್ಮದಿನೋತ್ಸವ ಮತ್ತು ಸಾಹಿತ್ಯೋತ್ಸವ ಕಾರ್ಯಕ್ರಮವನ್ನು ಕಾಸರಗೋಡು ಬದಿಯಡ್ಕ ಪೆರಡಾಲದ ಕವಿತಾ ಕುಟೀರದಲ್ಲಿ 2011 ಜೂನ್ 8 ರಂದು ಸಂಜೆ 3.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸರಕಾರದ ಪರವಾಗಿ ಅಭಿನಂದನ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕರಾವಳಿಯ ಮಹಾಕವಿಯಾಗಿ,ಸ್ವಾತಂತ್ರ್ಯ ಹೋರಾಟಗಾರರಾಗಿ,ಕರ್ನಾಟಕ ಏಕೀಕರಣ ಚಳವಳಿಯ ಮುಂಚೂಣಿಯ ನಾಯಕರಾಗಿ ,ಕಾಸರಗೋಡು ವಿಲೀನಿಕರಣ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕರಾಗಿ ದುಡಿದಿರುವ ಗಡಿನಾಡು ಕಾಸರಗೋಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಗೌರವಿಸಲ್ಪಡುವ ನಾಡೋಜರ ಕಾವ್ಯ ಗಾಯನ,ರಾಜ್ಯ ಮಟ್ಟದ ಕವಿಗ್ಠೋಯೊಂದಿಗೆ ಹುಟ್ಟು ಹಬ್ಬವನ್ನು  ವಿಶಿಷ್ಠ ರೀತಿಯಲ್ಲಿ ಆಚರಿಸಲಾಗುವುದು. ಸಾಧಕ ಒಡನಾಡಿಗಳನ್ನು ಗುರುತಿಸಿ ನಾಡೋಜ ಡಾ.ಕಯ್ಯಾರ ಕಿಂಞಣ್ಣ ರೈಯವರ ಹಸ್ತದಿಂದಲೇ ಪ್ರತ್ಠಿತ ನಾಡೋಜ ಡಾ.ಕಯ್ಯಾರ ಕಿಂಞಣ್ಣ ರೈ ಸಮ್ಮಾನವನ್ನು ನೀಡಿ ಗೌರವಿಸಲಾಗುವುದು.ಈ ಕಾರ್ಯಕ್ರಮದಲ್ಲಿ ಪ್ರಸಿದ್ದ ಸಾಹಿತಿಗಳು,ಸಚಿವರು,ಸಂಸದರು,ಶಾಸಕರು ಇನ್ನಿತರರು ಪಾಲ್ಗೊಳ್ಳಲಿದ್ದಾರೆಂದು ಅಭಿನಂದನ ಸಮಿತಿಯ ಅಧ್ಯಕ್ಷ ಶಿವರಾಮ ಕಾಸರಗೋಡು ಇವರು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English