ಮಂಗಳೂರು ಐಜಿ ಕಚೇರಿಯ ಡಿವೈಎಸ್ಪಿ ಆತ್ಮಹತ್ಯೆ

8:13 AM, Friday, July 8th, 2016
Share
1 Star2 Stars3 Stars4 Stars5 Stars
(No Ratings Yet)
Loading...

Ganapathiಮಂಗಳೂರು : ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈ ಎಸ್ ಪಿಯಾಗಿ ಕೆಲಸ ಮಾಡುತ್ತಿದ್ದ ಕೊಡಗು ಕುಶಾಲನಗರದ ಎಂ ಕೆ ಗಣಪತಿ ಗುರುವಾರ ಸಂಜೆ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹಿರಿಯ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ. ಗಣಪತಿ ಅವರನ್ನು ಇತ್ತೀಚೆಗೆ ಬೆಂಗಳೂರಿನಿಂದ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.

ಮಾಧ್ಯಮಗಳಿಗೆ ಸಿಕ್ಕಿರುವ ವಿಡಿಯೋ ಒಂದರಲ್ಲಿ ಗಣಪತಿ ಹಿರಿಯ ಅಧಿಕಾರಿಗಳ ಮೇಲೆ ನೇರವಾಗಿ ಆರೋಪ ಮಾಡಿದ್ದು ದಾಖಲಾಗಿದೆ. ಸಬ್ ಇನ್ಸ್ ಪೆಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಗಣಪತಿ ಅವರನ್ನು ಬಡ್ತಿ ನೀಡಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಗಣಪತಿ ಡೆತ್ ನೋಟ್ ವೊಂದನ್ನು ಬರೆದಿಟ್ಟಿದ್ದು ಕೆಲವು ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರನ್ನು ಬರೆದಿಟ್ಟಿದ್ದಾರೆ ಎನ್ನಲಾಗಿದ್ದು ತನಿಖೆ ನಂತರ ಇನ್ನಷ್ಟು ಮಾಹಿತಿ ಹೊರಬೀಳಲಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವಸತಿ ಗೃಹಕ್ಕೆ ಕೊಡಗು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಜುಲೈ 5 ಮಂಗಳವಾರ ಮುಂಜಾನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ಮಾವನ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English