ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮ ದ ಲೇಕ್ ಗಾರ್ಡನ್‌ನಲ್ಲಿ ಮಿನಿ ಐಫೆಲ್ ಟವರ್‌

1:18 PM, Thursday, July 28th, 2016
Share
1 Star2 Stars3 Stars4 Stars5 Stars
(No Ratings Yet)
Loading...

Pilikula-mini-towerಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮಕ್ಕೆ ಮತ್ತಷ್ಟು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಯೋಜನೆಯಾಗಿ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ನಿರ್ಮಿಸಲಾಗಿರುವ ಮಿನಿ ಐಫೆಲ್ ಟವರ್‌ನ ನಾಮಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅನಾವರಣಗೊಳಿಸಿದರು.

ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ಲ್ಲಿ ಪ್ರಪಂಚ ಹಾಗೂ ದೇಶದ ಸುಮಾರು 10 ಅದ್ಭುತಗಳ ಮಾದರಿಗಳನ್ನು ರಚಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಮಿನಿ ಐಫೆಲ್ ಟವರ್‌ನ್ನು ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್‌ನ ಮಾದರಿಯನ್ನು ಹೋಲುವ ಸುಮಾರು 50 ಅಡಿ ಎತ್ತರದ ಕಬ್ಬಿಣದ ಮಾದರಿ ಇದಾಗಿದೆ. ಚೆನ್ನೈ ಮೂಲದ ಪರಿಣಿತರ ತಂಡ ಇದನ್ನು ನಿರ್ಮಿಸಿದ್ದು, ಪ್ರವಾಸಿಗರು ಇದರ ಎದುರು ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಅವಕಾಶವೂ ಇಲ್ಲಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English