ಮಂಗಳೂರು: ಮಂಗಳೂರಿನಲ್ಲಿ ಬಹೂಪಯೋಗಿ ಕೇಂದ್ರವಾಗಿ ಹಜ್ ಭವನ ನಿರ್ಮಾಣ ಮಾಡಲು ರೂಪುರೇಖೆ ಸಿದ್ಧಪಡಿಸಿ ಅದಕ್ಕೆ ಬೇಕಾದ ಎಲ್ಲ ನೆರವನ್ನು ಸರಕಾರದಿಂದ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್ ಹೇಳಿದರು.
ಬಜಪೆ ಹಳೆ ವಿಮಾನ ನಿಲ್ದಾಣದಲ್ಲಿ 2016-17ನೇ ಸಾಲಿನ ಹಜ್ ಯಾತ್ರೆಯ ವಿಮಾನ ಯಾನದ ಉದ್ಘಾಟನಾ ಸಮಾರಂಭದಲ್ಲಿ ಅವರು ಬುಧವಾರ ಮಾತನಾಡಿದರು.
ಹಜ್ ಭವನ ಕೇವಲ ನೆಪ ಮಾತ್ರಕ್ಕೆ ನಿರ್ಮಾಣವಾಗುವಂತಾಗಬಾರದು. ಇತರ ಉತ್ತಮ ಕಾರ್ಯಕ್ರಮಗಳಿಗೂ ಅದು ಸದ್ಬಳಕೆಯಾಗುವಂತಿರಬೇಕು. ಈ ನಿಟ್ಟಿನಲ್ಲಿ ಬಹೂಪಯೋಗಿ ಹಜ್ ಭವನ ನಿರ್ಮಾಣ ಮಾಡಲು ಬೇಕಾದ ಎಲ್ಲ ಸಹಕಾರವನ್ನು ಸರಕಾರದಿಂದ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ಹಜ್ ಭವನ ಆ. 27ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಎ. ಮೊದಿನ್ ಬಾವಾ ಮಾತನಾಡಿ, ಮಂಗಳೂರಿನಲ್ಲಿ ಹಜ್ ಭವನಕ್ಕೆ ಸರಕಾರ ಈಗಾಗಲೇ 1 ಕೋಟಿ ರೂ. ಮೀಸಲಿಟ್ಟಿದೆ. ಆದರೆ ಭವನ ನಿರ್ಮಾಣಕ್ಕೆ ಕನಿಷ್ಠ 5 ಕೋಟಿ ರೂ. ಅಗತ್ಯವಿದೆ ಎಂದರು.
ಹಜ್ ನಿರ್ವಹಣಾ ಸಮಿತಿ ಅಧ್ಯಕ್ಷ ವೈ. ಮುಹಮ್ಮದ್ ಕುಂಞಿ ಅವರನ್ನು ಈ ವೇಳೆ ಸಮ್ಮಾನಿಸಲಾಯಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗಧಿರಿಕ ಪೂರೈಕೆ ಇಲಾಖೆ ಸಚಿವ ಯು.ಟಿ. ಖಾದರ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೇಯರ್ ಹರಿನಾಥ್, ಮಂಗಳೂರು ನಗರಾಭಿಧಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಮನಪಾ ಆಯುಕ್ತ ಮೊಹಮ್ಮದ್ ನಝೀರ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜೆ.ಟಿ. ರಾಧಾಕೃಷ್ಣ, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್, ಮೊದಧಿಲಾದಧಿವರು ಮುಖ್ಯ ಅತಿಥಿಗಳಾಗಿದ್ದರು.
ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖ ಅಹ್ಮದ್ ಮುಸ್ಲಿಯಾರ್ ದುಃವಾ ನೆರವೇರಿಸಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್. ಎಂ. ರಶೀದ್ ಸ್ವಾಗತಿಸಿದರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ರೋಷನ್ ಬೇಗ್ ಅವರು, ಸೌದಿ ಅರೇಬಿಯಾದಲ್ಲಿನ ಆರ್ಥಿಕ ಹಿಂಜರಿತ ಸಮಸ್ಯೆಯಲ್ಲಿ ಕನ್ನಡಿಗರು ಸಿಕ್ಕಿಹಾಕಿಕೊಂಡಿರುವ ಬಗ್ಗೆ ಮಾಹಿತಿ ಇಲ್ಲ. ಈ ಸಂಬಂಧ ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆಗೆ ಒಳಗಾಗಿರುವವರ ಬಗ್ಗೆ ಮಾಹಿತಿ ಬಂದಲ್ಲಿ ಅವರಿಗೆ ಎಲ್ಲ ನೆರವು ನೀಡಲಾಗುವುದು ಎಂದರು.
Click this button or press Ctrl+G to toggle between Kannada and English