ಮಂಗಳೂರು: ಮಹದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಹದಾಯಿ ನೀರು ಹಂಚಿಕೆ ವಿಚಾರವು ಕರ್ನಾಟಕ ಮತ್ತು ಗೋವಾದ ನಡುವೆ ಉದ್ಭವಿಸಿರುವ ವಿವಾದವಾಗಿರುವುದರಿಂದ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಆಮ್ ಆದ್ಮಿಯ ರಾಜ್ಯ ವಕ್ತಾರೆ ಶಾಂತಲಾ ದಾಮ್ಲೆ ಆಗ್ರಹಿಸಿದರು.
ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಈ ದಿಸೆಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಈ ಹೋರಾಟದಲ್ಲಿ ಭಾಗವಹಿಸುವ ಮೂಲಕ ಮಹಾದಾಯಿ ಯೋಜನೆಯನ್ನು ಅನುಷ್ಠಾನಗೊಳಿಸಲು ಹೋರಾಟ ನಡೆಸಬೇಕು. ಈ ಬಗ್ಗೆ ಪ್ರಧಾನಿಯನ್ನು ಒತ್ತಾಯಿಸಬೇಕು ಎಂದರು.
ನಮ್ಮ ಸರಕಾರಕ್ಕೆ ಮತ್ತು ಆಯ್ಕೆಯಾದ ಸಂಸದರಿಗೆ ನೀರಿನ ಬಗ್ಗೆ ಮತ್ತು ಜನತೆಯ ಬಗ್ಗೆ ಕಾಳಜಿ ಇಲ್ಲ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಯೋಜನೆ ಜಾರಿಗೊಳಿಸಲು ಪ್ರಯತ್ನಿಸಬೇಕು. ಇದನ್ನು ಅನುಷ್ಠಾನಗೊಳಿಸಲು ವಿಫಲರಾದರೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.
ಆಮ್ ಆದ್ಮಿ ಪಾರ್ಟಿ ಮುಖಂಡರಾದ ಅಬ್ದುಲ್ ಸಮದ್, ರೋಹನ್ ಸಿರಿ, ರಾಜೇಂದ್ರ, ರಾಬರ್ಟ್ ರೇಗೊ, ಹಬೀಬ್ ಖಾದರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Click this button or press Ctrl+G to toggle between Kannada and English