- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರಕಾರಿ ನೌಕರಿ ದೊರಕಬೇಕು: ಏರ್ಯ ಲಕ್ಷ್ಮೀನಾರಾಯಣ ಆಳ್ವ

Lakshminarayana-Alwa [1]ಬಂಟ್ವಾಳ: ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರಕಾರಿ ನೌಕರಿ ದೊರಕುವಂತೆ ಹೊಸ ಕಾನೂನು ಜಾರಿಗೊಳಿಸಬೇಕೆಂದು ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಹೇಳಿದರು.

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್‌ ಕ್ಲಬ್‌ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಸೋಮವಾರ ನಡೆದ ‘ಸರಕಾರಿ ಶಾಲೆಗಳನ್ನು ಉಳಿಸಿ’ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದುರ್ಗಾ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಪ್ರಕಾಶ್‌ ಅಂಚನ್‌ ಮಾತನಾಡಿ, ಶಿಕ್ಷ ಕರ ವರ್ಗಾವಣೆ ಪ್ರಕ್ರಿಯೆಯಿಂದಾಗಿ ಗ್ರಾಮೀಣ ಸರಕಾರಿ ಶಾಲೆಯ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವೊಂದು ಶಾಲೆಗಳಲ್ಲಿ ಒಬ್ಬರೇ ಶಿಕ್ಷ ಕರು ಎಲ್ಲ ಕೆಲಸ-ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಈ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಮುಚ್ಚುವ ಭೀತಿ ನಿರ್ಮಾಣವಾದೀತೆಂದು ಎಚ್ಚರಿಸಿದರು.

ಕ್ಲಬ್‌ನ ಮಾಧ್ಯಮ ಸಲಹೆಗಾರ ಸಂದೀಪ್‌ ಸಾಲ್ಯಾನ್‌ ಮಾತನಾಡಿ, ಸರಕಾರಿ ಶಾಲೆಯನ್ನು ಉಳಿಸುವಂತೆ ಸರಕಾರವನ್ನೇ ಬೇಡುವ ಸ್ಥಿತಿ ಒದಗಿರುವುದು ವಿಪರ್ಯಾಸ. ಶಾಲೆಗಳಿಗೆ ಪೂರ್ಣಪ್ರಮಾಣದಲ್ಲಿ ತರಗತಿವಾರು ಶಿಕ್ಷ ಕರನ್ನು ನೀಡದಿದ್ದರೆ ಗುಣಮಟ್ಟದ ಶಿಕ್ಷ ಣ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು. ಶಿಕ್ಷ ಣಪ್ರೇಮಿ ಅಶೋಕ್‌ ಭಟ್‌ ಹಾಗೂ ಎಸ್‌ಡಿಎಂಸಿ ಸದಸ್ಯರ ಪರವಾಗಿ ರಾಜೇಶ್‌ ಕೊಟ್ಟಾರಿ ಕಲ್ಲಡ್ಕ ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೇಡಿಕೆಗಳ ಮನವಿ ಹಾಗೂ ನಾನಾ ಶಾಲೆಗಳ ಎಸ್‌ಡಿಎಂಸಿ ನಿರ್ಣಯ ಕೈಗೊಂಡ ಬೇಡಿಗಳ ಮನವಿಯನ್ನು ಸಾಮಾಹಿಕವಾಗಿ ಅಪರ ಜಿಲಾಧಿಕಾರಿಯವರ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರಿನ ಬಲ್ಮಠದಲ್ಲಿರುವ ಸರಕಾರಿ ಶಿಕ್ಷ ಕರ ಶಿಕ್ಷ ಣ ತರಬೇತಿ ಕೇಂದ್ರವನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇಲ್ಲಿನ ವಿದ್ಯಾರ್ಥಿನಿಯರು ಪ್ರತ್ಯೇಕ ಮನವಿ ಸಲ್ಲಿಸಿದರು. ಜಿಲ್ಲೆಯ ನಾನಾ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಗ್ರಾಪಂ ಜನಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತರಗತಿವಾರು, ವಿಷಯವಾರು ಶಿಕ್ಷ ಕರನ್ನು ತಕ್ಷ ಣ ನೇಮಿಸಬೇಕು. ಹೆಚ್ಚುವರಿ ಶಿಕ್ಷ ಕರನ್ನು ವರ್ಗಾಯಿಸುವ ಪ್ರಕ್ರಿಯೆ ಕೈ ಬಿಡಬೇಕು ಎಂದು ಸರಕಾರವನ್ನು ಆಗ್ರಹಿಸಲಾಗಿದೆ. ಬೇಡಿಕೆಗಳಿಗೆ ಸ್ಪಂದನೆ ದೊರಕದಿದ್ದಲ್ಲಿ ಬೆಂಗಳೂರು ಚಲೋ ನಡೆಸುವುದು.