ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಪ್ರಧಾನಿ ಜೊತೆ ಮಾತನಾಡಲು ಕೇಂದ್ರ ಸಚಿವರ ಮೂಲಕ ಪ್ರಯತ್ನಿಸುತ್ತಿದ್ದು, ಆ.17ರ ನಂತರ ಭೇಟಿಗೆ ಸಮಯ ನಿಗದಿ ಪಡಿಸುವ ಸಾಧ್ಯತೆಯಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿ 2 ದಿನ ನಡೆದ ತುಳುವ ಐಸಿರಿದ ಐಸ್ರ ತುಳು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ನೇತ್ರಾವತಿ ನದಿ ತಿರುವು ಯೋಜನೆಯ ಹೆಸರನ್ನು ಬದಲಾಯಿಸಿದೆ. ಘಟ್ಟ ಪ್ರದೇಶದಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಪ್ರತಿಭಟನೆ ನಡೆಯುತ್ತಿದೆ.
ಆದರೆ ಪ್ರತಿಭಟನಾಕಾರರಲ್ಲಿ ಯಾರ ವಿರುದ್ಧ ಪ್ರತಿಭಟನೆ ನಡೆಸಬೇಕೆನ್ನುವ ಬಗ್ಗೆ ಮಾಹಿತಿಯಿಲ್ಲದೆ ಗೊಂದಲವಾಗಿದೆ. ರಾಜಕಾರಣಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನದಿಗಳಲ್ಲಿ ನೀರು ಉಳಿಯುವ ಸಾಧ್ಯತೆ ಕಡಿಮೆಯಾಗಲಿದೆ ಎಂದರು.
Click this button or press Ctrl+G to toggle between Kannada and English