ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದ.ಕ. ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಸೆ. 2ರ ಅಖಿಲ ಭಾರತ ಮುಷ್ಕರವನ್ನು ಬೆಂಬಲಿಸಿ ಆ. 17ರಿಂದ 19ರ ವರೆಗೆ ಜಿಲ್ಲಾದ್ಯಂತ ವಾಹನ ಪ್ರಚಾರ ಜಾಥಾ ಹಮ್ಮಿಕೊಳ್ಳಲಾಗಿದ್ದು, ಈ ನಿಮಿತ್ತ ಕೇಂದ್ರ ಬಸ್ ನಿಲ್ದಾಣದ ಎದುರು ಜಾಥಾಕ್ಕೆ ಚಾಲನೆ ನೀಡಲಾಯಿತು
ಜಾಥಾವ ಉದ್ಘಾಟಿಸಿದ ಹೆಚ್ಎಂಎಸ್ ಸಂಘಟನೆಯ ರಾಜ್ಯಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ದೇಶದ ಆಸ್ತಿಯಾಗಿರುವ ಕಾರ್ಮಿಕ ವರ್ಗ ಇಂದಿನ ಕೇಂದ್ರ ಸರ್ಕಾರದ ನೀತಿಗಳಿಂದ ಸಹಿಸಲಾರದ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಅದಕ್ಕಾಗಿಯೇ ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಅಖಿಲ ಭಾರತ ಮುಷ್ಕರವನ್ನು ಹಮ್ಮಿಕೊಂಡಿದೆ ಎಂದರು.
ಸಿಐಟಿಯು ರಾಜ್ಯ ಕಾರ್ಯದರ್ಶಿ ವಸಂತ ಆಚಾರಿ, ಎಐಟಿಯುಸಿ ದ.ಕ. ಜಿಲ್ಲಾ ಕಾರ್ಯದರ್ಶಿ ಎಚ್.ವಿ.ರಾವ್, ಸಿಐಟಯು ದ.ಕ. ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ಸುನೀಲ್ಕುಮಾರ್ ಬಜಾಲ್, ಬಿಎಸ್ಎನ್ಎಲ್ ನೌಕರ ಸಂಘದ ಮುಖಂಡ ಕೃಷ್ಣ ಮೊದಲಾದವರಿದ್ದರು.
Click this button or press Ctrl+G to toggle between Kannada and English