ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.
Click this button or press Ctrl+G to toggle between Kannada and English