ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಆಯೋಜಿಸುತ್ತಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ’ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಬುಧವಾರ ನಡೆಯಿತು. ಬೆಳಗ್ಗಿನಿಂದ ಸಂಜೆ ವರೆಗೆ ಒಟ್ಟು 8 ವೇದಿಕೆಗಳಲ್ಲಿ 27 ವಿಭಾಗಗಳ ಸ್ಪರ್ಧೆ ಜರಗಿದವು.
ರಾಷ್ಟ್ರ ಮಟ್ಟದ ಮಕ್ಕಳ ಉತ್ಸವವನ್ನು ಎ.ಜೆ. ಸಮೂಹ ಸಂಸ್ಥೆಯ ಅಧ್ಯಕ್ಷ ಎ.ಜೆ. ಶೆಟ್ಟಿ ಉದ್ಘಾಟಿಸಿ, ಶುಭ ಕೋರಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಧಿಸ್ಥಾನದ ವೇ| ಮೂ| ಲಕ್ಷ್ಮಿನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು.
ಕದ್ರಿ ದೇವಸ್ಥಾನ ಅರ್ಚಕರಾದ ಪ್ರಭಾಕರ ಅಡಿಗ, ಲಕ್ಷ್ಮಿನಾರಾಯಣ ಅಡಿಗ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, “ಉದಯವಾಣಿ’ ಸಹ ಉಪಾಧ್ಯಕ್ಷ ಆನಂದ್ ಕೆ., ಪ್ರಮುಖರಾದ ಪ್ರೊ| ಎಂ.ಬಿ. ಪುರಾಣಿಕ್, ಕೆ.ಎಸ್. ಕಲ್ಲೂರಾಯ, ಕಿರಣ್ ಜೋಗಿ, ತಾರಾನಾಥ ಶೆಟ್ಟಿ, ಮಹೇಶ ಮೂರ್ತಿ, ವಿನಯ ಆಚಾರ್, ಮಟ್ಟಿ ಲಕ್ಷ್ಮಿನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ ಪ್ರಸ್ತಾವನೆಧಿಗೈದು ಸ್ವಾಗತಿಸಿದರು. ಸುಧಾಕರ ರಾವ್ ಪೇಜಾವರ ವಂದಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಈ ಸ್ಪರ್ಧೆ ಆಯೋಜಿಸಿಕೊಂಡು ಬರಧಿಲಾಗಿದೆ. ಪುಟಾಣಿ ಮನಸ್ಸುಧಿಗಳಲ್ಲಿ ಶ್ರೀ ಕೃಷ್ಣನ ಸ್ವರೂಪ ಕಂಡುಕೊಳ್ಳುವ, ಆ ಮೂಲಕ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನ ನಡೆಸಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ತಿಳಿಸಿದರು.
Click this button or press Ctrl+G to toggle between Kannada and English