ಮಂಗಳೂರು: ಮಾಜಿ ಸಂಸದೆ ರಮ್ಯಾಗೆ ಮೊಟ್ಟೆ ಎಸೆದು ಪ್ರತಿಭಟಿಸಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಬೆಂಗಳೂರಿಗೆ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆಯುತ್ತಿರುವ ಮಂಗಳೂರಿನಲ್ಲಿ ಇಂತಹ ಘಟನೆ ನಡೆಯಬಾರದಿತ್ತು ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಇಂದು ನಗರದ ಸರ್ಕಿಟ್ ಹೌಸ್‌ನಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಂಗಳೂರು ಕುರಿತ ಹೇಳಿಕೆಗೆ ಪ್ರತ್ಯೇಕ ವ್ಯಾಖ್ಯಾನದ ಅಗತ್ಯವಿಲ್ಲ ಎಂದರು.
ಪೊಲೀಸರ ಬಡ್ತಿಯನ್ನು ಉದ್ದೇಶಪೂರ್ವಕವಾಗಿ ಉಳಿಸಿಕೊಂಡಿಲ್ಲ. ಬಡ್ತಿ ಸೂಕ್ತ ರೀತಿಯಲ್ಲಿ ನಡೆಯುತ್ತಿದೆ. 2005ರ ಎಸ್ಐ ಕೇಡರ್‌ನವರ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದರು.
ಜನಾರ್ದನ ಪೂಜಾರಿಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಿಷೇಧಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೂಜಾರಿ ಪಕ್ಷದ ಹಿರಿಯ ನಾಯಕರು. ಅವರ ಬಗ್ಗೆ ತುಂಬಾ ಗೌರವವಿದೆ. ಕೆಲವೊಮ್ಮೆ ಅವರ ಹೇಳಿಕೆಗಳು ಕಠೋರವಾಗಿರುತ್ತವೆ ಎಂದಷ್ಟೇ ಹೇಳಿದರು.
Click this button or press Ctrl+G to toggle between Kannada and English