ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು: ಪರಮೇಶ್ವರ್

11:12 AM, Saturday, August 27th, 2016
Share
1 Star2 Stars3 Stars4 Stars5 Stars
(No Ratings Yet)
Loading...

Parameshwarಮಂಗಳೂರು: ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂದು ಮಂಗಳೂರು ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋ ರಕ್ಷಣೆಯ ಹೆಸರಿನಲ್ಲಿ ದೇಶದೆಲ್ಲೆಡೆ ಹಲ್ಲೆ, ಕೊಲೆ ನಡೆಯುತ್ತಿವೆ.

ಪ್ರಧಾನಿ ಮೋದಿಯವರು ಗೋ ರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುವವರ ದಾಖಲೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬಳಿಕವೂ ಕರಾವಳಿಯಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆ ನಡೆದಿರುವ ಪ್ರಕರಣ ನಡೆದಿದೆ. ಈ ಬಗ್ಗೆ ಏನಾದರೂ ಕ್ರಮ ತೆಗೆದುಕೊಳ್ಳಲಾಗುವುದೇ ಎಂಬ ಪ್ರಶ್ನೆಗೆ, ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ. ಯಾರಿಗೂ ಕಾನೂನು ಮುರಿಯಲು ಸಾಧ್ಯವಿಲ್ಲ ಎಂದರು.

Parameshwarಕರಾವಳಿಯ ಯುವಕರು ಐಸಿಸ್‌ಗೆ ಸೇರ್ಪಡೆಯಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡೇ ಆಂತರಿಕ ಭದ್ರತಾ ವಿಭಾಗವು ಕಾರ್ಯ ನಿರ್ವಹಿಸುತ್ತದೆ.

ಇಂತಹ ಸಂಘಟನೆಗಳು ಐಸಿಸ್‌ಗೆ ನೇಮಕಾತಿ, ಯುವಕರನ್ನು ಕರೆದೊಯ್ಯುತ್ತಿದ್ದಾರೆಂಬ ನಿಖರ ಮಾಹಿತಿ ದೊರಕಿದ್ದಲ್ಲಿ ಅಂತಹ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕಾಸರಗೋಡು ವರದಿಯ ಬಳಿಕ ಈ ಕುರಿತಂತೆ ರಾಜ್ಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ನಿಗಾ ವಹಿಸಲಾಗುತ್ತಿದೆ ಎಂದು ಸಚಿವ ಪರಮೇಶ್ವರ್‌‌ ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English