ಮಂಗಳೂರು: ಸರ್ಕಾರದ ಇ ಆಡಳಿತ ವ್ಯಾಪ್ತಿಗೊಳಪಡುವ ಮಂಗಳೂರು-ಒನ್ ಗುತ್ತಿಗೆ ಪಡೆದಿರುವ ಸಿಎಂಎಸ್ ಕಂಪ್ಯೂಟರ್ಸ್ ಸಂಸ್ಥೆ ಅಧಿಕಾರಿಗಳು ಮಹಿಳಾ ಸಿಬ್ಬಂದಿ ಮೇಲೆ ನಡೆಸುತ್ತಿರುವ ದೌರ್ಜನ್ಯ ವಿರೋಧಿಸಿ ಮಂಗಳೂರು ಒನ್ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ನೌಕರರ ಹಿತರಕ್ಷಣಾ ವೇದಿಕೆ ಸಲಹೆಗಾರ ಬಿ.ಎಸ್. ಚಂದ್ರು, ಮಂಗಳೂರು ಒನ್ ಮಹಿಳಾ ಸಿಬ್ಬಂದಿ ತಮಗೆ ಆಗುತ್ತಿರುವ ಕಿರುಕುಳದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ನೀಡಿದ್ದರು. ಇದರಿಂದ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಸ್ಥೆಯ ಈ ಕ್ರಮವನ್ನು ವಿರೋಧಿಸಿ ಕದ್ರಿಯ ಸಿಎಂಎಸ್ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಲಾಗುವುದು. ಕೇಂದ್ರದಲ್ಲಿ ಕಳೆದ 6-7 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಲಿಖಿತ ಮಾಹಿತಿ ಒದಗಿಸದೆ ಮೌಖಿಕ ಆದೇಶ ನೀಡಿ ಕಿರುಕುಳ ನೀಡಲಾಗುತ್ತಿದೆ.
ಮಹಿಳಾ ಸಿಬ್ಬಂದಿಗೆ ಮಾನಸಿಕ ಹಿಂಸೆ, ಸಾರ್ವಜನಿಕವಾಗಿ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಜಿಲ್ಲಾಡಳಿತ ತಕ್ಷಣ ಮಧ್ಯ ಪ್ರವೇಶಿಸಿ ಸಿಬ್ಬಂದಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
Click this button or press Ctrl+G to toggle between Kannada and English