ಮೀಂಜ ಪಂ. ಸದಸ್ಯೆ ಯಶೋಧ ಆಳ್ವ ನಿಧನ

12:06 PM, Thursday, September 1st, 2016
Share
1 Star2 Stars3 Stars4 Stars5 Stars
(No Ratings Yet)
Loading...

Yashodha-alwaಮಂಜೇಶ್ವರ: ಮೀಂಜ ಗ್ರಾಮ ಪಂಚಾಯತ್‌ನ ಸದಸ್ಯೆ, ಹೊಸಂಗಡಿ ಬಳಿಯ ಕೊಡ್ಡ್ಡೆ ಮಜಿಬೈಲು ನಿವಾಸಿ ಚಂದ್ರಹಾಸ ಆಳ್ವರ ಪತ್ನಿ ಯಶೋಧ ಆಳ್ವ(57) ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕಳೆದ ಕೆಲವು ತಿಂಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತಿ, ಇಬ್ಬರು ಪುತ್ರಿಯರು,ಪುತ್ರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಕಳೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಮೀಂಜ ಗ್ರಾಮ ಪಂಚಾಯತ್‌ನ 11ನೇ ವಾರ್ಡ್ ಮಜಿಬೈಲ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯರಾಗಿದ್ದ ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ನೇಹ ಸ್ವ-ಸಹಾಯ ಸಂಘದ ಸ್ಥಾಪಕ ಅಧ್ಯಕ್ಷೆಯಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English