ಬಕ್ರೀದ್‌ ವೇಳೆ ಅಹಿತಕರ ಘಟನೆ ನಡೆಯದಂತೆ ಮುಸ್ಲಿಂ ಸಮುದಾಯದ ಮನವಿ

2:00 PM, Friday, September 9th, 2016
Share
1 Star2 Stars3 Stars4 Stars5 Stars
(No Ratings Yet)
Loading...

Bakridಮಂಗಳೂರು: ಸೆಪ್ಟಂಬರ್ 12 ರಂದು ಬಕ್ರೀದ್ ಆಚರಣೆ ನಡೆಯುತ್ತಿದ್ದು, ಬಳಿಕ ಮೂರು ದಿನಗಳ ಖುರ್ಬಾನಿ ಕೊಡುವುದು ಇಸ್ಲಾಂ ಧರ್ಮದಲ್ಲಿ ನಡೆದುಕೊಂಡ ಬಂದ ವಿಧಿ. ಈ ಸಂದರ್ಭದಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಮಾಡುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗವು ಐಜಿಪಿ, ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ.

ಜೊತೆಗೆ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮುಸ್ಲಿಮರಿಗೆ ಮನವಿ ಮುಸ್ಲಿಂ ಸೆಂಟ್ರಲ್ ಕಮಿಟಿ ಮಾಡಿದೆ. ಕೆಲ ದಿನಗಳ ಹಿಂದೆ ಕಟೀಲು ದೇವರ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರೀಕರಿಸಿರುವುದು ಖಂಡನೀಯ. ತಪ್ಪಿತಸ್ಥರ ಬಗ್ಗೆ ತಕ್ಷಣ ಕಾನೂನು ಕ್ರಮಕೈಗೊಳ್ಳುವಂತೆ ನಿಯೋಗವು ಇದೇ ಸಂದರ್ಭದಲ್ಲಿ ವಿನಂತಿಸಿತು.

ಇತ್ತೀಚೆಗೆ ನಡೆದ ಪ್ರಶಾಂತ್ ಪೂಜಾರಿ ಹಾಗೂ ಪ್ರವೀಣ್ ಪೂಜಾರಿಯವರ ಕೊಲೆಯಲ್ಲಿ ಸಂಘ ಪರಿವಾರದ ಕೈವಾಡ ಬೆಳಕಿಗೆ ಬಾರದ ಕಾರಣ ಅಮಾಯಕ ಮುಸ್ಲಿಂ ಯುವಕರ ಮೇಲೆ ಸುಳ್ಳು ಆಪಾದನೆ ಹೊರಿಸುವ ಹುನ್ನಾರ ನಡೆದಿದೆ. ಪೊಲೀಸರು ಅಧಿಕಾರಿಗಳು ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ. ಎಸ್. ಮೊಹಮ್ಮದ್ ಮಸೂದ್ ಮನವಿ ಮಾಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English