ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇಲ್ಲಿನ ಮೈಸೂರು ರಸ್ತೆ ಹಾಗೂ ನೈಸ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಬೆಂಕಿ ಹಚ್ಚಲಾಗಿದೆ.
ತಮಿಳುನಾಡು ರಾಜ್ಯದ ನೋಂದಣೆ ಸಂಖ್ಯೆ ಹೊಂದಿದ್ದ ಲಾರಿಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಎರಡೂ ಲಾರಿಗಳು ರಸ್ತೆಯಲ್ಲೇ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ.
ಇನ್ನು ನೈಸ್ ರಸ್ತೆಯಲ್ಲಿ ಮತ್ತೊಂದು ಲಾರಿಗೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದೆ. ತಮಿಳುನಾಡಿದ ಒಟ್ಟ ಐದು ಲಾರಿಗಳ ಮೇಲೆ ದಾಳಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
ನಗರದಲ್ಲಿರುವ ತಮಿಳುನಾಡು ಮೂಲದ ಅಂಗಡಿಗಳನ್ನು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡಿಸಿದ್ದಾರೆ. ಇಲ್ಲಿನ ಸುಕ್ಕದಕಟ್ಟೆಯಲ್ಲಿರುವ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದರು.
Click this button or press Ctrl+G to toggle between Kannada and English